

ಪಾಂಡವಪುರ : ತಾಲೂಕಿನ ಕ್ಯಾತನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ರೈತಸಂಘ ಬೆಂಬಲಿತ ಶಾಂತಮ್ಮ ಸಿದ್ದಾಚಾರ್ ಮಂಗಳವಾರ ಅವಿರೋಧ ಆಯ್ಕೆಯಾದರು.
ಅಧಿಕಾರ ಹಂಚಿಕೆ ಒಡಂಬಡಿಕೆ ಹಿನ್ನೆಲೆಯಲ್ಲಿ ಅಧ್ಯಕ್ಷೆ ಆಯಿಷಾ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದ ಹಿನ್ನ್ನೆಲೆಯಲ್ಲಿ ಅಧ್ಯಕ್ಷಗಾದಿಗೆ ಮಂಗಳವಾರ ಚುನಾವಣೆ ನಿಗದಿಯಾಗಿತ್ತು. 20 ಸದಸ್ಯ ಬಲದ ಗ್ರಾಪಂನಲ್ಲಿ ಎಲ್ಲ ಸ್ಥಾನಗಳಲ್ಲೂ ರೈತಸಂಘ ಬೆಂಬಲಿತ ಅಭ್ಯರ್ಥಿಗಳೇ ಆಯ್ಕೆಯಾಗಿದ್ದ ಕಾರಣ ಶಾಂತಮ್ಮ ಹೊರತುಪಡಿಸಿ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ಹಾಗಾಗಿ ಚುನಾವಣಾಧಿಕಾರಿ ರಮ್ಯಾಅವರು ಅವಿರೋಧ ಆಯ್ಕೆ ಘೋಷಿಸಿದರು.