ಶಾಂತಾಶ್ರಮ ಆವರಣದಲ್ಲಿ ಸ್ವಾಮೀಜಿ ಅಂತ್ಯಕ್ರಿಯೆ

h8-Laxman Savadi 1
Published on

ಹುಬ್ಬಳ್ಳಿ: ನಗರದ ಶಾಂತಾಶ್ರಮದ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ ಅವರ ಅಂತ್ಯಕ್ರಿಯೆ ಆಶ್ರಮದ ಆವರಣದಲ್ಲಿ ಶನಿವಾರದಂದು ಸಕಲ ಧಾರ್ವಿುಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ ಅವರು ಶುಕ್ರವಾರ ರಾತ್ರಿ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು. ಆಶ್ರಮದ ಆವರಣದಲ್ಲಿ ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಬಾಲೆಹೊಸೂರಿನ ಶ್ರೀ ದಿಂಗಾಲೇಶ್ವರ ಸ್ವಾಮೀಜಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹುಬ್ಬಳ್ಳಿ ಶಹರ ತಹಸೀಲ್ದಾರ ಶಶಿಧರ ಮಾಡ್ಯಾಳ, ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಸಿ, ನಗರದ ಶ್ರೀ ಸಿದ್ಧಾರೂಢ ಮಠದ ಶ್ರೀಗಳು, ವಿಜಯಪುರದ ಶ್ರೀಗಳು ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳ ವಿವಿಧ ಮಠಾಧೀಶರು, ನೂರಾರು ಭಕ್ತರು ಹಾಗೂ ಶಿಷ್ಯರು ಆಶ್ರಮಕ್ಕೆ ಆಗಮಿಸಿ, ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ ಅವರ ಅಂತಿಮ ದರ್ಶನ ಪಡೆದರು. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಸ್ವಾಮೀಜಿ ಕೊಡುಗೆಯನ್ನು ಸ್ಮರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net