ಶಾಂತಿ ಪೂವಯ್ಯ, ಬಾಬಿ ಭೀಮಯ್ಯ ಅವಿರೋಧ ಆಯ್ಕೆ

10-npk-1
ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ಮೇದರ ಶಾಂತಿ ಪೂವಯ್ಯ ಹಾಗೂ ಉಪಾಧ್ಯಕ್ಷರಾಗಿ ಚೋಕಿರ ಬಾಬಿ ಭೀಮಯ್ಯ ಅವಿರೋಧವಾಗಿ ಆಯ್ಕೆಯಾದರು. ಅಪ್ಪಚೆಟ್ಟೊಳಂಡ ಮನು ಮುತ್ತಪ್ಪ, ಚಂಗೆಟ್ಟಿರ ಕುಮಾರ್ ಸೋಮಣ್ಣ, ಕರವಂಡ ಲವ ನಾಣಯ್ಯ, ಕರವಂಡ ಅಪ್ಪಣ್ಣ ಇತರರಿದ್ದರು.
Published on

ನಾಪೋಕ್ಲು: ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮೇದರ ಶಾಂತಿ ಪೂವಯ್ಯ ಹಾಗೂ ಉಪಾಧ್ಯಕ್ಷರಾಗಿ ಚೋಕಿರ ಬಾಬಿ ಭೀಮಯ್ಯ ಅವಿರೋಧ ಆಯ್ಕೆಯಾದರು.

ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಮೇದರ ಶಾಂತಿ ಪೂವಯ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚೋಕಿರ ಬಾಬಿ ಭೀಮಯ್ಯ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಯಾಗಿದ್ದ ಮಡಿಕೇರಿ ತಹಸೀಲ್ದಾರ್ ಪ್ರವೀಣ್‌ಕುಮಾರ್ ಇಬ್ಬರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಅಪ್ಪಚೆಟ್ಟೊಳಂಡ ಮನು ಮುತ್ತಪ್ಪ, ಶಕ್ತಿ ಕೇಂದ್ರದ ಪ್ರಮುಖರಾದ ಚಂಗೆಟ್ಟಿರ ಕುಮಾರ್ ಸೋಮಣ್ಣ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ಕರವಂಡ ಲವ ನಾಣಯ್ಯ, ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣಗಳ ಸದಸ್ಯರಾದ ಕರವಂಡ ಅಪ್ಪಣ್ಣ, ಬೂತ್ ಅಧ್ಯಕ್ಷ ಚಿಯಂಡಿರ ದಿನೇಶ್ ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು, ಬಿಜೆಪಿಯ ಮುಖಂಡರು ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net