ಶಾಂತಿಯುತ ಚುನಾವಣೆಗೆ ಕ್ರಮವಹಿಸಿ

01 HANUR 3
Published on

ಹನೂರು: ವಿಧಾನಸಭಾ ಚುನಾವಣೆಗೆ ಅಗತ್ಯ ಸಿದ್ಧತೆ ಹಾಗೂ ಶಾಂತಿಯುತವಾಗಿ ನಡೆಯಲು ಕ್ರಮವಹಿಸಬೇಕು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಸೂಚಿಸಿದರು.
ಪಟ್ಟಣದ ಕ್ರಿಸ್ತರಾಜ ಶಿಕ್ಷಣ ಸಂಸ್ಥೆಯಲ್ಲಿ ತೆರೆಯಲಾಗಿರುವ ಭದ್ರತಾ ಕೊಠಡಿ ಹಾಗೂ ಮಸ್ಟರಿಂಗ್ ಕೇಂದ್ರಕ್ಕೆ ಶನಿವಾರ ಸಂಜೆ ಭೇಟಿ ಪರಿಶೀಲಿಸಿ ಮಾತನಾಡಿದರು. ವಿದ್ಯುನ್ಮಾನ ಮತಯಂತ್ರಗಳಿಗೆ ಸ್ಟಿಕ್ಕರ್ ಅಳವಡಿಸಬೇಕು. ಭದ್ರತಾ ಕೊಠಡಿ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಚುನಾವಣೆ ವೇಳೆ ಯಾವುದೇ ಲೋಪವಾಗದಂತೆ ಅಗತ್ಯ ಕ್ರಮ ಅನುಸರಿಸಬೇಕು ಎಂದು ಸೂಚಿಸಿದರು. ಪ್ರೊಬೆಷನರಿ ತಹಸೀಲ್ದಾರ್ ಮಂಜುನಾಥ್, ಭೂ ಮಾಪನ ಇಲಾಖೆಯ ಸಹಾಯಕ ನಿರ್ದೇಶಕ ಚೇತನ್, ತಾಲೂಕು ಸರ್ವೇಯರ್ ಕುಮಾರಸ್ವಾಮಿ, ಆರ್‌ಐ ಮಹದೇವಸ್ವಾಮಿ, ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net