ಶಾಂತಿಯುತವಾಗಿ ಹಬ್ಬ ಆಚರಿಸಿ

25 SIRAGUPPA 02
Published on

ಸಿರಗುಪ್ಪ: ರಂಜಾನ್ ಹಿನ್ನೆಲೆಯಲ್ಲಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಶಾಂತಿ ಸಭೆ ನಡೆಯಿತು.

ಡಿವೈಎಸ್ಪಿ ವೆಂಕಟೇಶ್ ಮಾತನಾಡಿ, ರಂಜಾನ್ ಸಂದರ್ಭದಲ್ಲಿ ಮುಸ್ಲಿಮರು ಶಾಂತಿ ಕಾಪಾಡಬೇಕು. ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಜಾಗ್ರತೆ ವಹಿಸಿಬೇಕು. ಇನ್ನೊಬ್ಬರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕು. ಸಾಮಾಜಿಕ ಜಾಲತಾಣದಲ್ಲಿ ಹರಡುವ ವದಂತಿಗಳಿಗೆ ಕಿವಿಗೊಡದೆ ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಸಲಹೆ ನೀಡಿದರು.

ಪ್ರಮುಖರಾದ ಅಬ್ದುಲ್ ನಬಿ, ಮಹಮದ್ ಅಲಿ, ಹಂಡಿ ಬಾಷಾ ಸಾಬ್, ಚೌಧರಿ ಖಾಜಾ ಸಾಬ್, ರಾವಿಹಾಳ್ ಹುಸೇನ್ ಸಾಬ್, ಕೆ.ಅಬ್ದುಲ್ ಸುಭಾನ್ ಸಾಬ್ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net