

ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬ್ಯೂಟಿ ಪಾರ್ಲರ್ ಒಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿ ಬರೋಬ್ಬರಿ ೫೦ ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಚಿಕ್ಕಮಗಳೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಬೈಪಾಸ್ ರಸ್ತೆಯಲ್ಲಿರುವ ಲುಕ್‌ಬುಕ್ ಬ್ಯೂಟಿ ಪಾರ್ಲರ್‌ನಲ್ಲಿ ಭಾನುವಾರ ರಾತ್ರಿ ಎಂಟೂವರೆ ವೇಳೆಗೆ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರಾದರೂ ಅಷ್ಟರಲ್ಲಾಗಲೇ ಇಡೀ ಮಳಿಗೆ ಬೆಂಕಿಯ ಕೆನ್ನಾಲಿಗೆಗೆ ಭಸ್ಮವಾಗಿತ್ತು.