ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ

9 hly 2 A
Published on

ಹಳಿಯಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ ಘಟನೆ ಪಟ್ಟಣದ ಕುಂಬಾರಗಲ್ಲಿಯಲ್ಲಿ ಗುರುವಾರ ಸಂಭವಿಸಿದೆ.
ಕುಂಬಾರ ಗಲ್ಲಿಯ ಶಿವಪುತ್ರ ಬಸವಣ್ಣೆಪ್ಪ ಹಂಗರಕಿ ಎಂಬುವವರ ಮನೆಯಲ್ಲಿ ಅವಘಡ ನಡೆದಿದ್ದು ಕೋಣೆಯಲ್ಲಿದ್ದ ಟಿವಿ, ಮಂಚ, ಬಟ್ಟೆಗಳು ಸೇರಿದಂತೆ ಬೆಲೆ ಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಲ್ಲದೆ, ಇದೇ ಕೊಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನ ಮೂರ್ತಿ ಕೂಡ ಬೆಂಕಿಯ ಕೆನ್ನಾಲಿಗೆಗ ತುತ್ತಾಗಿದೆ. ಹಳಿಯಾಳ ಅಗ್ನಿಶಾಮಕ ದಶದ ಅಧಿಕಾರಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಶಾಸಕ ಆರ್.ವಿ. ದೇಶಪಾಂಡೆ ಭೇಟಿ ನೀಡಿ ಪರಿಶೀಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಸಂತ್ರಸ್ತ ಕುಟುಂಬದವರಿಗೆ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು. ಪುರಸಭೆ ಅಧ್ಯಕ್ಷ ಅಜರುದ್ದೀನ್ ಬಸರಿಕಟ್ಟಿ ಇತರರು ಇದ್ದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್. ಘೊಟ್ನೇಕರ, ವಾರ್ಡ್​ನ ಪುರಸಭೆ ಸದಸ್ಯ ಸುರೇಶ ವಗ್ರಾಯಿ ಕೂಡ ಸ್ಥಳಕ್ಕೆ ಭೇಟಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net