ಶಾಲಾ-ಕಾಲೇಜುಗಳ ಮೂಲಸೌಕರ್ಯಕ್ಕೆ ಆದ್ಯತೆ

10rajesh2
Published on

ಚಾಮರಾಜನಗರ: ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಶಾಲಾಕಾಲೇಜುಗಳಿಗೆ ಅಗತ್ಯವಾದ ಮೂಲಸೌಕರ್ಯ ಕಲ್ಪಿಸಿಕೊಡುವುದಕ್ಕೆ ಪ್ರಥಮ ಆದ್ಯತೆ ನೀಡಲಾಗುತ್ತಿದೆ ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ನಗರದ ಕರಿನಂಜನಪುರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ರೈಟ್‌ಸಂಸ್ಥೆಯಿಂದ 2 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 6 ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಚಾಮರಾಜನಗರ ಜಿಲ್ಲಾ ಕೇಂದ್ರವಾದ ಬಳಿಕ ಗ್ರಾಮೀಣವಿದ್ಯಾರ್ಥಿಗಳು ಉನ್ನತಶಿಕ್ಷಣಪಡೆಯಲು ರಾಜ್ಯಸರ್ಕಾರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಸುವರ್ಣಗಂಗೋತ್ರಿ, ಸರ್ಕಾರಿ ಮಹಿಳಾಪ್ರಥಮದರ್ಜೆ ಕಾಲೇಜು, ವೈದ್ಯಕೀಯ ಕಾಲೇಜು, ಕೃಷಿವಿಜ್ಞಾನಕಾಲೇಜು, ಎರಡುವರ್ಷದ ಹಿಂದೆ ರಾಜ್ಯಸರ್ಕಾರ ಚಾಮರಾಜನಗರಕ್ಕೆ ಪ್ರತ್ಯೇಕ ವಿವಿಮಂಜೂರುಮಾಡಿದೆ ಎಂದು ಹೇಳಿದರು.

ಉನ್ನತ ಶಿಕ್ಷಣಪಡೆಯಲು ಮೈಸೂರು, ಬೆಂಗಳೂರುನಗರಗಳಿಗೆ ತೆರಳಬೇಕಿದ್ದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸರ್ಕಾರ ಉನ್ನತಶಿಕ್ಷಣಕೊಡುವ ನಿಟ್ಟಿನಲ್ಲಿ ಪದವಿ ಹಾಗೂ ತಾಂತ್ರಿಕವಿದ್ಯಾಲಯವನ್ನು ತೆರೆದಿದೆ. ಜಿಲ್ಲೆಯ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣಪಡೆಯುವತ್ತ ಮುಂದಾಗಬೇಕು ಎಂದು ಸಲಹೆ ನೀಡಿದರು.

ರೈಟ್ ಸಂಸ್ಥೆಯವರು ಗುಣಮಟ್ಟದ ಕೊಠಡಿಗಳನ್ನು ನಿರ್ಮಾಣ ಮಾಡಿಕೊಡುವ ಮೂಲಕ ವಿದ್ಯಾರ್ಥಿಗಳಿಗೆ ಅನೂಕೂಲಮಾಡಿಕೊಡಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜುಪ್ರಾಂಶುಪಾಲೆ ಅಶ್ವಿನಿ, ರೈಟ್ ಸಂಸ್ಥೆ ಎಂಜಿನಿಯರ್ ಆಯೂಬ್ ಖಾನ್, ನೇಸರ ಎಂಟರ್ ಪ್ರೈಸಸ್‌ನ ಗುತ್ತಿಗೆದಾರ ಮಹೇಶ್‌ಕುಮಾರ್, ಮಾದಾಪುರ ಗ್ರಾಪಂ ಅಧ್ಯಕ್ಷ ರೂಪೇಶ್, ನಾಗೇಶ್ ಹಾಗೂ ಉಪನ್ಯಾಸಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net