ಶಾಲಾ-ಕಾಲೇಜುಗಳಲ್ಲಿ ತಿರಂಗಾ ಸಂಭ್ರಮ: 700ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಏಕಕಾಲಕ್ಕೆ ಜಯಘೋಷ

ANP WEB 1
Published on

ಆನಂದಪುರ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಯೋಜಿಸಿರುವ ಹರ್ ಘರ್ ತಿರಂಗಾ ಅಭಿಯಾನದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ.

ಆನಂದಪುರದ ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳಿಗೆ ಶಾಸಕ ಹರತಾಳು ಹಾಲಪ್ಪ ತಿರಂಗಾ ವಿತರಿಸಿದರು. ಬಳಿಕ ಎಲ್‌ಕೆಜಿಯಿಂದ ಹಿಡಿದು ಪಿಯುಸಿ ವರೆಗಿನ 700ಕ್ಕೂ ಅಧಿಕ ವಿದ್ಯಾರ್ಥಿಗಳು ಏಕಕಾಲದಲ್ಲಿ ರಾಷ್ಟ್ರಧ್ವಜ ಹಿಡಿದು ಶಾಲೆಯ ಕಾರಿಡಾರ್, ಮೇಲ್ಭಾಗದಲ್ಲಿ ನಿಂತು ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿ ಸಂಭ್ರಮಿಸಿದರು. ನೋಡುಗರನ್ನು ಈ ದೃಶ್ಯ ಪುಳಕಿತಗೊಳಿಸಿತು.

ಯಡೇಹಳ್ಳಿಯ ಜ್ಞಾನ ಸಹ್ಯಾದ್ರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಶಾಸಕ ಹರತಾಳು ಹಾಲಪ್ಪ ರಾಷ್ಟ್ರ ಧ್ವಜ ವಿತರಿಸಿ, ಸಂಭ್ರಮದಿಂದ ಮನೆ ಮನೆಯಲ್ಲೂ ರಾಷ್ಟ್ರ ಧ್ವಜ ಹಾರಿಸುವಂತೆ ಸೂಚಿಸಿದರು.

ಆಚಾಪುರ ಗ್ರಾಪಂ ವ್ಯಾಪ್ತಿಯ ಖೈರಾ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಎಸ್‌ಡಿಎಂಸಿ ಅಧ್ಯಕ್ಷ ವಿರೂಪಾಕ್ಷಪ್ಪ ವಿದ್ಯಾರ್ಥಿಗಳಿಗೆ ರಾಷ್ಟ್ರ ಧ್ವಜ ವಿತರಿಸಿದರು. ಧ್ವಜಗಳ ಹಿಡಿದು ವಿದ್ಯಾರ್ಥಿಗಳು ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net