

ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಆಲಗೂರ ಗ್ರಾಮದ ವರ್ದಮಾನ ಖಾಸಗಿ ಶಾಲೆಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ವಾರ್ಷಿಕ ಸ್ನೇಹ ಸಮ್ಮೇಳನ ಮುಗಿಸಿಕೊಂಡು ಶಾಲಾ ವಾಹನದಲ್ಲಿ ಮನೆಗೆ ಹೋಗುವಾಗ ಈ ಘಟನೆ ಸಂಭವಿಸಿದೆ.
ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ರಸ್ತೆಯ ಮೇಲೆ ನಿಲ್ಲಿಸಿದ ಕಬ್ಬಿನ ಟ್ರ್ಯಾಕ್ಟರ್ ಗೆ ಹಾಯಿಸಿದ ಪರಿಣಾಮ ನಾಲ್ಕು ವಿದ್ಯಾರ್ಥಿಗಳು ಸಾವನಪ್ಪಿದ್ದು ಎರಡು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, 20 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೆಲ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಕೆಲ ವಿದ್ಯಾರ್ಥಿಗಳನ್ನು ಪಾಲಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತದಲ್ಲಿ ತಾಲ್ಲೂಕಿನ ಕವಟಗಿ ಗ್ರಾಮದ ವಿದ್ಯಾರ್ಥಿ ಗೋವಿಂದ ಸದಾಶಿವ ಜಂಬಗಿ(11), ಶ್ವೇತಾ ಪಾಟೀಲ(11), ಬಸವರಾಜ ಕೊಠಗಿ(15), ಸಾಗರ ಗುರಲಿಂಗ ಕಡಕೋಳ(16) ಸಾವನಪ್ಪಿದ್ದಾರೆ.
ಸಾವಳಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ, ಸರ್ಕಾರಿ ಆಸ್ಪತ್ರೆಗೆ ರಾತ್ರಿ ಎಸ್ಪಿ ಅಮರನಾಥ ರೆಡ್ಡಿ ಬೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.