ಶಾಲೆ ಅಂಗನವಾಡಿಗಳಿಗೆ ರಜೆ

rain
Published on

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದೂವರೆದಿದ್ದು, ಆ.18ರಂದು ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆ ಅಂಗನವಾಡಿ ಕೇಂದ್ರ ಶಿಶುಪಾಲನಾ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಆವತಿ, ಜಾಗರ, ವಸ್ತಾರೆ, ಆಲ್ದೂರು, ಖಾಂಡ್ಯ ಹೋಬಳಿಗಳು ಸೇರಿದಂತೆ ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ, ಎನ್‌.ಆರ್‌.ಪುರ ತಾಲೂಕು ವ್ಯಾಪ್ತಿಯಲ್ಲಿ ರಜೆ ಘೋಷಣೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net