ಶಾಲೆ-ಕಾಲೇಜು ಬಳಿ ತಂಬಾಕು ಮಾರದಿರಿ

28KUDLIGI1
Published on

ಕೂಡ್ಲಿಗಿ: ಶಾಲೆ, ಕಾಲೇಜುಗಳ ಬಳಿ ತಂಬಾಕು ಉತ್ಪನ್ನ ಮಾರಾಟ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವುದು ಕಾನೂನು ಬಾಹಿರ ಚಟುವಟಿಕೆಯಾಗಿದೆ ಎಂದು ಟಿಎಚ್‌ಒ ಡಾ.ಎಸ್.ಪಿ.ಪ್ರದೀಪ್ ಕುಮಾರ್ ಹೇಳಿದರು.

ಪಟ್ಟಣದಲ್ಲಿ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಸೋಮವಾರ ಮಾತನಾಡಿದರು. ಆರೋಗ್ಯಕ್ಕೆ ಮಾರಕವಾಗಿರುವ ತಂಬಾಕು ಉತ್ಪನ್ನಗಳ ಸೇವನೆ ನಿಯಂತ್ರಿಸಲು ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆ (ಕೊಟ್ಪಾ) ಜಾರಿಯಲ್ಲಿದೆ. ಶಾಲೆ, ಕಾಲೇಜುಗಳ 100 ಮೀ. ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು. ಕೆಲವೆಡೆ ಶಾಲಾ, ಕಾಲೇಜುಗಳ ಸಮೀಪ ಇರುವ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳನ್ನು ಕದ್ದುಮುಚ್ಚಿ ಮಾರುತ್ತಿರುವ ಆರೋಪ ಕೇಳಿಬರುತ್ತಿದೆ. ಮಾರಾಟ ಮಾಡುವುದು ಕಂಡು ಬಂದಲ್ಲಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ವಯಸ್ಕರಲ್ಲದವರಿಗೆ ಯಾವುದೇ ಕಾರಣಕ್ಕೂ ತಂಬಾಕು ಉತ್ಪನ್ನಗಳನ್ನು ನೀಡಬಾರದು. ಸಿಗರೇಟು ಸೇದುವುದರಿಂದ ಸೇದುವವರೊಂದಿಗೆ ಅವರ ಪಕ್ಕದಲ್ಲಿ ಕುಳಿತಿರುವವರ ಮೇಲೂ ಪರಿಣಾಮ ಬೀರಲಿದೆ. ಧೂಮಪಾನ ಮಾಡುವುದರಿಂದ ಕ್ಯಾನ್ಸರ್, ಹೃದಯರೋಗ ಹಾಗೂ ಇತರ ವಿವಿಧ ಕಾಯಿಲೆಗಳಿಗೆ ತುತ್ತಾಗುವ ಸಂಭವ ಇರುತ್ತದೆ ಎಂದು ಟಿಎಚ್‌ಒ ಡಾ.ಎಸ್.ಪಿ.ಪ್ರದೀಪ್ ಕುಮಾರ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net