ಶಾಲೆಗಳಿಗೆ ಅಗತ್ಯ ಸೌಲಭ್ಯ

10ark1
ಅರಕಲಗೂಡು ತಾಲೂಕಿನ ಸಂತೆಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ 15.50 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗೆ ಶಾಸಕ ಎ.ಟಿ.ರಾಮಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದರು. ದೇವರಾಜು, ಬಾಲರಾಜ್, ಸ್ವಾಮಿಗೌಡ ಇತರರಿದ್ದರು.
Published on

ಅರಕಲಗೂಡು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಶಾಸಕ ಎ.ಟಿ.ರಾಮಸ್ವಾಮಿ ಹೇಳಿದರು.

ತಾಲೂಕಿನ ಸಂತೆಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ 15.50 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲಿಯೂ ನೈತಿಕ ಮೌಲ್ಯಗಳು ಕುಸಿಯುತ್ತಿವೆ. ಮಕ್ಕಳಲ್ಲಿ ಉನ್ನತ ಮೌಲ್ಯಗಳನ್ನು ಬಿತ್ತುವ ಮೂಲಕ ಹಾದಿ ತಪ್ಪುತ್ತಿರುವ ಸಮಾಜವನ್ನು ಸರಿದಾರಿಗೆ ತರಲು ಪ್ರಯತ್ನಿಸಬೇಕಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜ್, ಸಿ.ಆರ್.ಸಿ. ಬಾಲರಾಜ್, ಅಕ್ಷರ ದಾಸೋಹ ಅಧಿಕಾರಿ ಶಿವಕುಮಾರ್, ಗ್ರಾಪಂ ಅಧ್ಯಕ್ಷೆ ಮಣಿ ಸ್ವಾಮಿಗೌಡ, ಉಪಾಧ್ಯಕ್ಷ ಸೋಮಶೇಖರ್, ಸದಸ್ಯೆ ಲಕ್ಷ್ಮಮ್ಮ ಈರಯ್ಯ, ಪಿಡಿಒ ರಾಜೇಗೌಡ, ಎಸ್‌ಡಿಎಂಸಿ ಸದಸ್ಯರು, ಶಾಲಾ ಶಿಕ್ಷಕರು ಮತ್ತು ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net