ಶಾಲೆಗೆ ವಿವಿಧ ಸಾಮಗ್ರಿ ಕೊಡುಗೆ

ಶಾಲೆಗೆ ವಿವಿಧ ಸಾಮಗ್ರಿ ಕೊಡುಗೆ
Published on

ಸಿದ್ದಾಪುರ: ಅಮ್ಮತ್ತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸಂಸ್ಥೆ ವತಿಯಿಂದ ಕ್ರೀಡೋಪಕರಣ, ಧ್ವನಿವರ್ಧಕ ಹಾಗೂ ಕಲಿಕಾ ಸಾಮಗ್ರಿಗಳನ್ನು ನೀಡಲಾಯಿತು.

ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸಂಸ್ಥೆಯ 35 ಸ್ವಯಂಸೇವಕರ ತಂಡ ಶಾಲೆಗೆ ಆಗಮಿಸಿ ಸಾಮಗ್ರಿ ವಿತರಿಸಿ ಶಾಲೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿ, ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟರು. ವಿದ್ಯಾರ್ಥಿಗಳಿಗೆ ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಿ ಗೆದ್ದವರಿಗೆ ಬಹುಮಾನ ವಿತರಿಸಲಾಯಿತು.

ಸಿಸ್ಕೋ ಸಂಸ್ಥೆಯ ಮುಖ್ಯಸ್ಥ ಅಮ್ಮತ್ತಿಯ ಶ್ರೀ ಮಚ್ಚಾರಂಡ ಅಯ್ಯಪ್ಪ, ಸಂಪತ್ ಬಾನಂಡ, ಪವನ್, ಪ್ರಶಾಂತ್, ಜಾಗೃತಿ ಟ್ರಸ್ಟ್ ಆಡಳಿತ ಅಧಿಕಾರಿ ಆರ್.ಕಣ್ಣನ್, ಖಜಾಂಚಿ ಕೊಂಡಿಂಜಮ್ಮಂಡ ಶರಣು, ಜಾಗೃತಿ ಟ್ರಸ್ಟ್ ಸ್ಥಾಪಕ ರೇಣು ಅಪ್ಪಚ್ಚು ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಎಸ್. ಸೋಮಕ್ಕ, ನಿವೃತ್ತ ಮುಖ್ಯ ಶಿಕ್ಷಕಿ ಮಚ್ಚರಂಡಾ ಗಂಗಮ್ಮ, ಶಿಕ್ಷಕರು, ಅಭಿವೃದ್ಧಿ ಸಮಿತಿ ಸದಸ್ಯರು, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net