ಶಾಲೆಯಿಂದ ಹೊರಗುಳಿದ ಮಕ್ಕಳ ಮುಖ್ಯವಾಹಿನಿಗೆ ತನ್ನಿ

CTD 30 ADC MEETING--09
Published on

ಚಿತ್ರದುರ್ಗ: ಬಾಲಕಾರ್ಮಿಕರನ್ನು ಗುರುತಿಸಿ,ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕಾರ್ಮಿಕ ನಿರೀಕ್ಷಕರು ಹೆಚ್ಚಿನ ಮುತುವರ್ಜಿ ವಹಿಸ ಬೇಕೆಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಡಿಸಿಕಚೇರಿಯಲ್ಲಿ ಗುರುವಾರ ವಿಶ್ವ ಬಾಲಕಾರ್ಮಿಕ ಪ ದ್ಧತಿ ವಿರೋಧಿ ದಿನಾಚರಣೆ ಕುರಿತಂತೆ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಮತ್ತು ಜಿಲ್ಲಾಮಟ್ಟದ ಟಾಸ್ಕ್‌ಪೋರ್ಸ್ ಸಭೆಯಲ್ಲಿ ಮಾತ ನಾಡಿದ ಅವರು,ಕಾರ್ಮಿಕ ಅಧಿಕಾರಿಗಳು ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಪಡೆದು, ಶಾಲೆಯಿಂದ ಹೊರಗುಳಿದ ಮಕ್ಕಳ ನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗಬಾರದು.
ಮಂಡಕ್ಕಿ,ಇಟ್ಟಿಗೆ ಭಟ್ಟಿಗಳು,ಗ್ಯಾರೇಜ್‌ಗಳಲ್ಲಿ ಬಾಲಕಾರ್ಮಿಕರು ಕಾರ್ಯನಿರ್ವಹಿಸುವ ಸಂಭವ ಹೆಚ್ಚಾಗಿರುವುದರಿಂದ ಕಾರ್ಮಿಕ ನಿ ರೀಕ್ಷಕರು ನಿಯಮಿತವಾಗಿ ತಪಾಸಣೆ ಮಾಡಬೇಕು.ಬಾಲ್ಯಾ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿ ಬಗ್ಗೆ ಅರಿವು ಮೂಡಿಸ ಬೇಕೆಂ ದರು.
ಪ್ರಭಾರ ಡಿಡಿಪಿಐ ಎಂ.ನಾಸಿರುದ್ದೀನ್ ಮಾತನಾಡಿ,ಜಿಲ್ಲೆಯಲ್ಲಿ 764 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು,ಪಾಲಕರ ವಲಸೆ ಕಾರ ಣದಿಂದಾಗಿ ಮೊಳಕಾಲ್ಮೂರು ಹಾಗೂ ಹೊಸದುರ್ಗ ತಾಲೂಕಿನಲ್ಲಿ ಹೆಚ್ಚಿನ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು,ಅವರನ್ನುಮುಖ್ಯ ವಾಹಿನಿಗೆ ತರಲು ಕ್ರಮವಹಿಸಲಾಗುತ್ತಿದೆ ಎಂದರು.
ಕಾರ್ಮಿಕ ಅಧಿಕಾರಿ ಜಿ.ಬಿ.ಚಂದ್ರಶೇಖರಯ್ಯ ಮಾತನಾಡಿ,ಜೂನ್ 12ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನವನ್ನು ಆ ಚರಿಸಲಾಗುತ್ತದೆ. ಅಂದು ಬೆಳಗ್ಗೆ 10ಕ್ಕೆ ನಗರದ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯಿಂದ ವೀರ ವನಿತೆ ಒನಕೆ ಓಬವ್ವ ವೃತ್ತದವರೆಗೂ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು.400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಲಿದ್ದಾರೆ ಎಂದರು. ಎಲ್ಲ ತಾಲೂಕುಗಳಲ್ಲೂ ತಹಸೀಲ್ದಾರ್ ನೇತೃತ್ವದಲ್ಲಿ ಕಾರ್ಮಿಕರ ನಿರೀಕ್ಷಕರು ವಿಶ್ವ ಬಾಲಕಾರ್ಮಿಕ ಪದ್ಧ್ದತಿ ವಿರೋಧಿ ದಿನ ಆಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಸಬೇಕು. ಜೂನ್ 1ರಿಂದ 30ರವರೆಗೆ ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಾಲ್ಯ ಮತ್ತು ಕಿಶೋರಾ ವಸ್ಥೆಯ ಕಾರ್ಮಿಕರನ್ನು ಪತ್ತೆ ಕಾರ್ಯಾಚರಣೆ ನಡೆಸಲಾಗುವುದು ಎಂದರು.
ಎಎಸ್‌ಪಿ ಎಸ್.ಜೆ.ಕುಮಾರಸ್ವಾಮಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುಬ್ರನಾಯಕ್,ಮಹಿಳಾ ಮತ್ತು ಮ ಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಭಾರತಿ ಆರ್.ಬಣಕಾರ್,ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್‌ಕುಮಾರ್,ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್,ಲೋಕೋಪಯೋಗಿ ಇಲಾಖೆ ಇಇ ಮಲ್ಲಿಕಾರ್ಜುನ್, ತಹಸೀಲ್ದಾರ್ ಡಾ.ನಾಗ ವೇಣಿ,ಕಾರ್ಮಿಕ ನಿರೀಕ್ಷಕ ರಾಜಣ್ಣ ಮತ್ತಿತರ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net