ಶಾಸಕ ಅಮೃತ ಜನ್ಮದಿನಂದು ಆರೋಗ್ಯ ಸೇವೆ

1111111111111
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಶಾಸಕ ಅಮೃತ ದೇಸಾಯಿ ಅವರ ೪೫ನೇ ಜನ್ಮದಿನದ ಅಂಗವಾಗಿ ತಾಲೂಕಿನ ಗರಗ ಶ್ರೀ ಗುರು ಮಡಿವಾಳೇಶ್ವರ ಮಠದ ಆವರಣದಲ್ಲಿ ನ. ೧೬ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ `ಅಮೃತ ಆರೋಗ್ಯ ಸೇವೆ' ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎಂದು ಗ್ರಾಮೀಣ ಮಂಡಳ ಅಧ್ಯಕ್ಷ ರುದ್ರಪ್ಪ ಅರವಾಳ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಗೆಳೆಯರ ಬಳಗವು ಅಮೃತ ದೇಸಾಯಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದೆ. ಶಿಬಿರದಲ್ಲಿ 60ಕ್ಕೂ ಹೆಚ್ಚು ತಜ್ಞ ವೈದ್ಯರು ಪಾಲ್ಗೊಂಡು ಸಾರ್ವಜನಿಕರ ಆರೋಗ್ಯ ತಪಾಸಣೆ ಮಾಡುವರು. ಎಲ್ಲ ವರ್ಗದ ಜನರು, ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರ ತಪಾಸಣೆ ಮಾಡಿ ಅಗತ್ಯವುಳ್ಳವರಿಗೆ ಉಚಿತ ಔಷಽ ವಿತರಣೆ ಮಾಡಲಾಗುವುದು ಎಂದರು.
ಗೆಳೆಯರ ಬಳಗವು ಕಳೆದ ಹಲವು ವರ್ಷಗಳಿಂದ ಸಾರ್ವಜನಿಕರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ಆಹಾರದ ಕಿಟ್ ಮತ್ತು ಅಗತ್ಯ ವಸ್ತುಗಳನ್ನು ಉಚಿತವಾಗಿ ವಿತರಿಸಿದೆ. ಈ ಬಾರಿ ಶಾಸಕ ಅಮೃತ ದೇಸಾಯಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿರುವ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸುಮಾರು 10 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net