ಶಾಸಕ ಖಾಶೆಂಪುರಗೆ ಕರೊನಾ

Bandeppa Kashempur
Published on

ಬೀದರ್: ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ ಅವರಿಗೆ ಕರೊನಾ ಸೋಂಕು ತಗುಲಿದೆ. ಗುರುವಾರ ಕರೊನಾ ಪರೀಕ್ಷೆ ಮಾಡಿಸಿದಾಗ ಸೋಂಕು ದೃಢಪಟ್ಟಿದೆ. ಕ್ಷೇತ್ರದ ವಿವಿಧೆಡೆ ಸಂಚರಿಸುತ್ತಿರುವಾಗ ಯಾರದೋ ಸೋಂಕಿತರ ಸಂಪರ್ಕಕ್ಕೆ ಬಂದ ಕಾರಣ ಇವರಿಗೂ ವೈರಸ್ ಅಂಟಿದೆ. ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಾವುದೇ ರೋಗ ಲಕ್ಷಣಗಳಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net