ಶಾಸಕ ಪಪ್ಪಿ ಮನೆ ಬಳಿ ತಮಟೆ ಸದ್ದು

CTD 16 STRIKE-BADRA
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 4;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39;
Published on

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ತ್ವರಿತ ವಿಷಯದಲ್ಲಿ ರಾಜ್ಯ-ಕೇಂದ್ರ ಸರ್ಕಾರ ನಿರ್ಲಕ್ಷೃ ವಹಿಸಿದೆ ಎಂದು ಆರೋಪಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸದಸ್ಯರು, ನಗರದ ಜೆಸಿಆರ್ ಬಡಾವಣೆಯಲ್ಲಿರುವ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಬಳಿ ಸೋಮವಾರ ತಮಟೆ ಚಳವಳಿ ನಡೆಸಿದರು.
ಯೋಜನೆ ತ್ವರಿತ ಅನುಷ್ಠಾನಕ್ಕೆ ಅಗತ್ಯ ಅನುದಾನ ತಾರದೆ ನಿದ್ರಾವಸ್ಥೆಗೆ ಜಾರಿರುವ ಜನಪ್ರತಿನಿಧಿಗಳ ನಡೆ ಖಂಡಿಸಿ ಎದ್ದೇಳು ಜನ ಸೇವಕ ಅಂದೋಲನದ ಭಾಗವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿ, ಭದ್ರಾ ಮೇಲ್ದಂಡೆಗೆ ಘೋಷಿತ 5300 ಕೋಟಿ ರೂ. ಅನುದಾನ ಬಿಡುಗಡೆಗೆ ಉದಾಸೀನ ತೋರುತ್ತಿರುವ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಘೋಷಿಸಿದರು.
ಅನುದಾನ ಬಿಡುಗಡೆಗೆ ನಿರ್ಲಕ್ಷೃ ತೋರುತ್ತಿರುವ ಸರ್ಕಾರಗಳ ವಿರುದ್ಧ ಪ್ರತಿಭಟನೆ ಮುಂದುವರಿಯಲಿದೆ. ಕೇಂದ್ರ ಸಚಿವ ವಿ.ಸೋಮಣ್ಣ ಅವರ ತುಮಕೂರು ಜಿಲ್ಲಾ ಕೇಂದರದಲ್ಲಿರುವ ಕಚೇರಿ ಬಳಿ ಅಕ್ಟೋಬರ್ ಮೊದಲ ವಾರ ಚಳವಳಿ ನಡೆಸಲಾಗುವುದು. ಯೋಜನೆ ಕುರಿತಂತೆ ನಮ್ಮವರಿಂದಲೇ ನಮಗೆ ದ್ರೋಹವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಭದ್ರಾ ಮೇಲ್ದಂಡೆ ಯೋಜನೆಯಡಿ ತುಮಕೂರು ಜಿಲ್ಲೆ ಶಿರಾ, ಚಿಕ್ಕನಾಯಕನಹಳ್ಳಿ, ಪಾವಗಡ ತಾಲೂಕಿನ 85 ಸಾವಿರ ಹೆಕ್ಟೇರ್‌ಗೆ ನೀರುಣಿಸಲಾಗುತ್ತಿದೆ. 131ಕ್ಕೂ ಅಧಿಕ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ತುಮಕೂರಿನ ಸೋಮಣ್ಣ ಕೇಂದ್ರದಲ್ಲಿ ಜಲಶಕ್ತಿ ಇಲಾಖೆ ಸಹಾಯಕ ಸಚಿವರೂ ಆಗಿದ್ದಾರೆ. ಈ ಯೋಜನೆ ಅವರ ವ್ಯಾಪ್ತಿಗೆ ಬರುತ್ತದೆ. ಕರ್ನಾಟಕವನ್ನು ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್ ಕೇಂದ್ರ ಹಣಕಾಸು ಸಚಿವೆ ಆಗಿದ್ದರೂ ಅನುದಾನ ಬಿಡುಗಡೆಗೆ ಆಗಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಸೋಮಣ್ಣ ಕಚೇರಿ ಬಳಿ ನಡೆಸುವ ಪ್ರತಿಭಟನೆಗೆ ಆ ಭಾಗದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಪ್ರತಿಭಟನೆ ವೇಳೆ ಶಾಸಕರು ನಿವಾಸದಲ್ಲಿ ಇರಲಿಲ್ಲ. ಈ ವೇಳೆ ಪ್ರತಿಭಟನಾಕಾರರು ಮಲಗಿದ್ದ ಸಾಕು, ಎದ್ದೇಳಿ ಜನ ಸೇವಕರೇ ಇತ್ಯಾದಿ ಘೋಷಣೆಗಳನ್ನು ಕೂಗಿದರು.
ಸಮಿತಿ ಜಿಲ್ಲಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಡಾ.ಸಂಗೇನಹಳ್ಳಿ ಅಶೋಕ್‌ಕುಮಾರ್, ಕೆ.ಆರ್.ದಯಾನಂದ್, ಚಿಕ್ಕಪ್ಪನಹಳ್ಳಿ ಷಣ್ಮುಖ, ಕೆ.ಟಿ.ಶಿವಕುಮಾರ್, ವೀಣಾ ಗೌರಣ್ಣ, ಕಾಂತರಾಜ್ ಹುಣಿಸೆಕಟ್ಟೆ, ಮಲ್ಲಾಪುರ ತಿಪ್ಪೇಸ್ವಾಮಿ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮುದ್ದಾಪುರ ನಾಗಣ್ಣ, ಇಸಾಮುದ್ರ ಪ್ರಭು, ಸಿದ್ದೇಶ್ ಜಾನುಕೊಂಡ, ಜೆ.ಎನ್.ಕೋಟೆ ಓಂಕಾರಪ್ಪ, ಮೊಳಕಾಲ್ಮೂರು ಮಂಜುನಾಥ್, ಚಳ್ಳಕೆರೆ ಹಂಪಣ್ಣ, ತಮಟಕಲ್ಲು ಸಿದ್ದಪ್ಪ, ಕಲ್ಲೇನಹಳ್ಳಿ ಕುಮಾರ್,ಬ್ಯಾಡರಹಳ್ಳಿ ಶಿವಕುಮಾರ್, ನಿತ್ಯಶ್ರೀ, ಲಕ್ಷ್ಮಕ್ಕ, ಜಿ.ಎನ್.ಲಿಂಗರಾಜ್, ಗೋಪಾಲರೆಡ್ಡಿ, ಲಕ್ಷ್ಮಣರೆಡ್ಡಿ, ಕುಬೇರರೆಡ್ಡಿ, ಡಿ.ಎಸ್.ಹಳ್ಳಿ ತಿಪ್ಪೇಸ್ವಾಮಿ, ಎನ್.ಆರ್.ಮಹಾಂತರೆಡ್ಡಿ, ಸೈಯದ್ ಇಸಾಕ್, ಮಾಲತೇಶ ಅರಸ್ ಮತ್ತಿತರರು ಭಾಗವಹಿಸಿದ್ದರು.

*ಹೊಳಲ್ಕೆರೆ ಶಾಸಕ ನಿವಾಸದೇದುರು 24ಕ್ಕೆ ಧರಣಿ
ಅನುಷ್ಠಾನ ಹೋರಾಟ ಸಮಿತಿ ಪಕ್ಷಾತೀತ ಸಂಘಟನೆಯಾಗಿದ್ದು, ಮಧ್ಯ ಕರ್ನಾಟಕದ ನೀರಾವರಿ ಬೇಡಿಕೆ ಮಂಡಿಸಿದೆ. ಸಂಸದ ಗೋವಿಂದ ಕಾರಜೋಳ ನಿವಾಸ ಬಳಿ ಪ್ರತಿಭಟನೆ ನಡೆಸಲಾಗಿದೆ. ಸೆ.24ರಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮನೆ ಬಳಿ ಚಳವಳಿ ನಡೆಸಲಾಗುವುದು ಎಂದು ಲಿಂಗಾರೆಡ್ಡಿ ತಿಳಿಸಿದರು.

*ಕೋಟ್
ನೀರಿಗಾಗಿ ರೈತರು ಮನೆ-ಜಮೀನು ಕೆಲಸ ಬಿಟ್ಟು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಆದರೆ, ಆಡಳಿತ ಮತ್ತು ಪ್ರತಿಪಕ್ಷದವರು ಆರೋಪ ಮತ್ತು ಪ್ರತ್ಯಾರೋಪದಲ್ಲಿ ಕಾಲ ಕಳೆಯುತ್ತಿದ್ದಾರೆ. ತಕ್ಷಣವೇ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಮುಂದಾಗಬೇಕು.
ಹಂಪಯ್ಯನಮಾಳಿಗೆ ಧನಂಜಯ
ರೈತ ಸಂಘದ ಜಿಲ್ಲಾಧ್ಯಕ್ಷ, ಚಿತ್ರದುರ್ಗ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net