ಶಾಸಕ ಪೊನ್ನಣ್ಣ ಭೇಟಿಯಾದ ಯುಕೊ ನಿಯೋಗ

26MDK08
ಯುಕೊ ಸಂಘಟನೆ ವತಯಿಂದ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಅಭಿನಂದಿಸಿ, ಕೊಡವರ ಪ್ರಮುಖ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಲಾಯಿತು. ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ಚೆಪ್ಪುಡಿರ ಸುಜು ಕರುಂಬಯ್ಯ, ಅಪ್ಪಾರಂಡ ವೇಣು ಪೊನ್ನಪ್ಪ, ನೆಲ್ಲಮಕ್ಕಡ ಮಾದಯ್ಯ, ಕಳ್ಳಿಚಂಡ ರಾಬಿನ್ ಸುಬ್ಬಯ್ಯ, ಕಳ್ಳಿಚಂಡ ದೀನ ಉತ್ತಪ್ಪ, ತನ್ವಿ ಉತ್ತಪ್ಪ ಮತ್ತಿತರರು ಇದ್ದರು.
Published on

ಮಡಿಕೇರಿ: ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದಲ್ಲಿ ಯುಕೊ ಸಂಘಟನೆಯ ನಿಯೋಗ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ವಿರಾಜಪೇಟೆಯ ಅವರ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ ಕೊಡವ ಸಾಂಪ್ರದಾಯಿಕ ಚಾಲೆ ನೀಡಿ ಅಭಿನಂದಿಸಿತು.
ಈ ವೇಳೆ ಕೊಡವರ ಪ್ರಮುಖ ಮೂರು ಬೇಡಿಕೆಗಳನ್ನು ಪೊನ್ನಣ್ಣ ಅವರ ಗಮನಕ್ಕೆ ತರಲಾಯಿತು. ರಾಜ್ಯ ಕೊಡವ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ. ಅನುದಾನ ನೀಡಬೇಕು. ಹಿಂದುಳಿದ ವರ್ಗಗಳ ಮೀಸಲಾತಿಯ ರಾಜ್ಯ ಪಟ್ಟಿಯಲ್ಲಿ ಪ್ರವರ್ಗ 3ಎ ರಲ್ಲಿ ವರ್ಗೀಕರಣ , ಕೊಡವರನ್ನು ಪ್ರವರ್ಗ 3ಎ ಕೇಂದ್ರ ಪಟ್ಟಿಯಲ್ಲಿ ಸೇರಿಸಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಕೊಡವರ ಪಾರಂಪರಿಕ ತಾಣಗಳಾದ ಮಂದ್, ಮಾನಿ, ಕ್ಯಾಕೊಳ, ಚೂಟ್‌ಂಗಳದಂತಹ ಸಾಂಸ್ಕೃತಿಕ ಕೇಂದ್ರಗಳ ಕಂದಾಯ ದಾಖಲಾತಿಗಳನ್ನು ಸರಿಪಡಿಸಬೇಕು ಎನ್ನುವ ಬೇಡಿಕೆ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಪೊನ್ನಣ್ಣ, ಸಂಪುಟ ರಚನೆಯ ನಂತರ ಸರ್ಕಾರದೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ನಿಯೋಗದಲ್ಲಿ ಚೆಪ್ಪುಡಿರ ಸುಜು ಕರುಂಬಯ್ಯ, ಅಪ್ಪಾರಂಡ ವೇಣು ಪೊನ್ನಪ್ಪ, ನೆಲ್ಲಮಕ್ಕಡ ಮಾದಯ್ಯ, ಕಳ್ಳಿಚಂಡ ರಾಬಿನ್ ಸುಬ್ಬಯ್ಯ, ನಂದೇಟಿರ ರವಿ ಸುಬ್ಬಯ್ಯ, ಅಜಿನಿಕಂಡ ಸೂರಜ್ ತಿಮ್ಮಯ್ಯ, ಮಚ್ಚಾಮಾಡ ರಮೇಶ್, ತೀತಿಮಾಡ ಬೋಸು ಅಯ್ಯಪ್ಪ, ಪುದಿಯೊಕ್ಕಡ ದಿನೇಶ್, ಬೊಳಿಯಂಗಡ ಬೋಪಣ್ಣ, ಪಳಂಗಂಡ ಸುಬ್ಬಣ್ಣ, ಚೆಪ್ಪುಡಿರ ಪ್ರತಿಮಾ ಕರುಂಬಯ್ಯ, ಪಾಂಡಂಡ ಸ್ವಾತಿ, ಬೊಳ್ಳಚೆಟ್ಟಿರ ಮೈನಾ, ಕಳ್ಳಿಚಂಡ ದೀನ ಉತ್ತಪ್ಪ, ತನ್ವಿ ಉತ್ತಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net