ಶಾಸಕ ಪ್ರೀತಂಗೌಡ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

ಶಾಸಕ ಪ್ರೀತಂಗೌಡ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ
Published on

ಅರಸೀಕೆರೆ: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜಿಪಂ ಮಾಜಿ ಸದಸ್ಯೆ ಭವಾನಿ ರೇವಣ್ಣ ಕುರಿತು ಶಾಸಕ ಪ್ರೀತಂ ಗೌಡ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ತಾಲ್ಲೂಕಿನ ಗಂಡಸಿ ಹ್ಯಾಂಡ್ ಪೋಸ್ಟ್ ಗ್ರಾಮದಲ್ಲಿ ಜೆಡಿಎಸ್ ಮುಖಂಡ ಹೊಸೂರು ಗಂಗಾಧರ್ ಅವರ ನೇತೃತ್ವದಲ್ಲಿ ಇತ್ತೀಚೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಪ್ರತಿಕೃತಿ ದಹನ ಮಾಡಲಾಯಿತು.

ಅಧಿಕಾರದ ಅಮಲಿನಿಂದ ಲಘುವಾಗಿ ಮಾತನಾಡುತ್ತಿರುವ ಬಿಜೆಪಿ ಶಾಸಕರಿಗೆ ತಕ್ಕಪಾಠ ಕಲಿಸುವ ಸಮಯ ಹತ್ತಿರವಾಗಿದೆ. ಸಮಾಜದ ಏಳಿಗೆಗೆ ದುಡಿಯುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ಸದಸ್ಯರ ಬಗ್ಗೆ ಲಘುವಾಗಿ ಮನಬಂದಂತೆ ನಾಲಿಗೆ ಹರಿಬಿಟ್ಟುವುದು ಅಕ್ಷಮ್ಯ. ಶಾಸಕ ಪ್ರೀತಂಗೌಡ ತಕ್ಷಣವೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಸಹಕಾರ ಸಂಘದ ಅಧ್ಯಕ್ಷ ಬಾಚೇನಹಳ್ಳಿ ಪುಟ್ಟಸ್ವಾಮಿ, ಅರುಣ್, ಕೆಂಕೆರೆ ಕೇಶವ, ಶಿವೆಗೌಡ,ಶಂಕರಪ್ಪ, ಬೆಳಗುಂಬ ಜಗದೀಶ್, ಪುಟ್ಟರಾಜು, ಶಂಭು, ಮಾಹಾದೇವಪ್ಪ, ರೋಹಿತ್, ಮನು, ಗಣೇಶ್, ರವಿ, ಅಶ್ವತ್ ಇನ್ನಿತರರು ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net