ಶಾಸಕ ಯತ್ನಾಳ ವಿರುದ್ಧ ಕ್ರಮಕ್ಕೆ ಆಗ್ರಹ

YATNAL
Published on

ಬೆಳಗಾವಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಐಎಂಐಎಂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು.

ಕೊಪ್ಪಳದಲ್ಲಿ ಇತ್ತೀಚಿಗೆ ನಡೆದಿರುವ ಪ್ರಕರಣ ಖಂಡಿಸುವ ಭರದಲ್ಲಿ ಯತ್ನಾಳ ಅವರು, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಹೇಳಿಕೆ ನೀಡಿದ್ದಾರೆ. ಮುಸ್ಲಿಂ ಹೆಣ್ಣು ಮಕ್ಕಳನ್ನು ಮದುವೆಯಾಗುವ ಹಿಂದು ಯುವಕರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಈ ಮೂಲಕ ಸಮಾಜದಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ದು, ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ರವಾನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net