ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು

CTD 2 KCVeerendra (Puppy)--0005
Published on

ಚಿತ್ರದುರ್ಗ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಎದುರಿಸುತ್ತಿದ್ದ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ಅವರ ಬೆಂಬಲಿಗರಿಗೆ ಜೆಎಂಎಫ್‌ಸಿ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.
2023ರ ವಿಧಾನಸಭಾ ಚುನಾವಣೆ ವೇಳೆ ನಗರದ ಹೊರಪೇಟೆಯಲ್ಲಿ ಮಧ್ಯರಾತ್ರಿ ಪಟಾಕಿ ಸಿಡಿಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿ ಸಾರ್ವಜನಿಕರಿಗೆ ತೊಂದರೆ ಮಾಡಿದ್ದಾರೆ ಎಂದು ವೀರೇಂದ್ರ ಪಪ್ಪಿ ಸೇರಿ 11 ಜನರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ್ದ ಪೊಲೀಸರು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಕೋರ್ಟ್ ಸಮನ್ಸ್ ಜಾರಿ ಮಾಡಿದ್ದರಿಂದಾಗಿ 11 ಜನರು ಕೋರ್ಟ್‌ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಗೀತಾಕುಂಬಾರ್, ಶಾಸಕರು ಸೇರಿ ಎಲ್ಲ 11 ಜನರಿಗೂ ಜಾಮೀನು ಮಂಜೂರು ಮಾಡಿ, ಜೂನ್ 8ಕ್ಕೆ ಪ್ರಕರಣ ಮುಂದೂಡಿದರು. ಆರೋಪಿತರ ಪರವಾಗಿ ವಕೀಲ ಎಂ.ಉಮೇಶ್ ಹಾಜರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net