

ಕಲಬುರಗಿ: ಬಸವಕಲ್ಯಾಣ ಶಾಸಕ ಶರಣು ಸಲಗರ ವಿರುದ್ಧ ಭ್ರಷ್ಟಾಚಾರ ಪ್ರೋತ್ಸಾಹಿಸಿದ ಆರೋಪದ ಮೇಲೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ ಎಂದು ಪ್ರಜಾ ಜಾಗೃತಿ, ಪ್ರಜಾ ಕಲ್ಯಾಣ ವೇದಿಕೆ ಅಧ್ಯಕ್ಷ ಶರಣ ಐಟಿ ತಿಳಿಸಿದರು. ಬಸವಕಲ್ಯಾಣ ಪಿಡಬ್ಲೂಡಿ ಇಲಾಖೆ ಲೆಕ್ಕಶಾಖೆಯ ಸಿಬ್ಬಂದಿ ವೆಂಕಟರಾವ ಅವರಿಗೆ ಕರೆ ಮಾಡಿ, ೧೦ ಸಾವಿರ ರೂ. ಪಡೆದು ಕೆಲಸ ಮಾಡಿಕೊಡಬೇಕು ಎಂದು ಹೇಳಿ ಅಧಿಕಾರ ದುರುಪಯೋಗ ಪಡೆಸಿಕೊಂಡಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯಾದಗಿರಿಯಲ್ಲಿ ನಡೆದ ಅಹವಾಲು ಸಭೆಯಲ್ಲಿ ಲೋಕಾಯುಕ್ತರಿಗೆ ದೂರು ನೀಡಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಭ್ರಷ್ಟಾಚಾರಕ್ಕೆ ಪ್ರಚೋದನೆ ನೀಡಿರುವ ಆಡಿಯೋ ದೊರಕ್ಕಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಉಪ ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದರು.