ಶಾಸಕರ ಕಚೇರಿ ಉದ್ಘಾಟನೆ ನಾಳೆ

Published on

ಮದ್ದೂರು: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನೂತನವಾಗಿ ಶಾಸಕರ ಕಚೇರಿಯನ್ನು ಸೆ.4 ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನೆ ಮಾಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ತಹಸೀಲ್ದಾರ್ ಕಚೇರಿಯಲ್ಲಿ ಶಾಸಕರ ಕಚೇರಿಯನ್ನು ತೆರೆಯಲಾಗುತ್ತಿದೆ. ಸಾರ್ವಜನಿಕರು ತಮ್ಮ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದರೆ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ವಹಿಸಲಾಗುತ್ತದೆ. ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕಚೇರಿ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net