ಶಾಸಕರೇ ಕಣ್ಣೀರಿಟ್ಟರೆ ಅವರಿಗೆ ಮತ ಕೊಟ್ಟ ಜನರ ಗತಿ ಏನು?

IMG-20221118-WA0029
Published on

ಮೈಸೂರು: ಶಾಸಕರೇ ಕಣ್ಣೀರಿಟ್ಟರೆ ಅವರಿಗೆ ಮತ ಕೊಟ್ಟ ಜನರ ಗತಿ ಏನು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರನ್ನು ಕುರಿತು ಪ್ರಶ್ನಿಸಿದರು.

ಮೈಸೂರಿನಲ್ಲಿ ಸೃಷ್ಟಿಯಾಗಿರುವ ಗುಂಬಜ್ ಮಾದರಿಯ ಬಸ್ ನಿಲ್ದಾಣದ ವಿವಾದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರು ಕಣ್ಣೀರು ಹಾಕಿರುವುದನ್ನು ನಾನು ನೋಡಿದ್ದೇನೆ. ಸಂಸದರು ಕಣ್ಣೀರು ಹಾಕಿಸಿರುವುದನ್ನೂ ಗಮನಿಸಿದ್ದೇನೆ. ಹೀಗಾದರೆ, ಇವರಿಗೆ ಮತ ನೀಡಿದ ಜನರ ಕತೆ ಏನು ಎಂದು ಚಾಟಿ ಬೀಸಿದರು.

ಮಸೀದಿಯನ್ನಾದರೂ ಮಾಡಿ, ಗೋಪುರವನ್ನಾದರೂ ಮಾಡಿ. ಜನರಿಗೆ ನೆರಳು ಕೊಡಿ. ಆದರೆ, ಕೆಡವಿ ಹಾಕುವ ಕೆಲಸ ಮಾಡಬೇಡಿ. ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನೂ ಮಾಡಬೇಡಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net