ಶಿಕ್ಷಕ ಪ್ರವೀಣ್‌ಗೆ ನೇಷನ್ ಬಿಲ್ಡರ್ ಪ್ರಶಸ್ತಿ

28ss1award sanmana
Published on

ಶನಿವಾರಸಂತೆ: ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ಪ್ರತಿವರ್ಷ ನೀಡುವ ನೇಷನ್ ಬಿಲ್ಡರ್ ಅವಾರ್ಡ್ ಅನ್ನು ಗೌಡಳ್ಳಿ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಅವರಿಗೆ ಪ್ರದಾನ ಮಾಡಲಾಯಿತು.

ಗೋಪಾಲಪುರ ಹರ್ಷಿತ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ರೋಟರಿ ಜಿಲ್ಲಾ ಸಹಾಯಕ ಪ್ರಾಂತಪಾಲ ಹರಿ ಆರ್. ಕ್ಷಿತಿ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ರೋಟರಿ ಸಂಸ್ಥೆಯು ಸಮಾಜ ಸೇವೆ ಮೂಲಕ ಜನಮನ್ನಣೆ ಗಳಿಸಿದ ಸೇವಾ ಸಂಸ್ಥೆಯಾಗಿದೆ. ಈ ಮೂಲಕ ರೋಟರಿ ಸದಸ್ಯರು ಯಾವುದೆ ಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ರೋಟರಿ ಸಂಸ್ಥೆಯು ಈ ಭಾಗದಲ್ಲಿ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಜತೆಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರೋಟರಿ ಕ್ಲಬ್ ಅಧ್ಯಕ್ಷ ವಿ.ಎಲ್.ವರ್ಷಿತ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶ್ವೇತಾ ವಸಂತ್, ಎಚ್.ವಿ.ದಿವಾಕರ್, ಕೆ.ಪಿ.ಜಯಕುಮಾರ್, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net