ಶಿಕ್ಷಕರ ದಿನಾಚರಣೆ 5ರಂದು

Teachers' first poetry conference at Mudhol
Published on

ಬಸವಕಲ್ಯಾಣ: ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಿತಿಯಿಂದ ೬೨ನೇ ಶಿಕ್ಷಕರ ದಿನಾಚರಣೆ ಮಂಗಳವಾರ ಬೆಳಗ್ಗೆ ೧೦-೩೦ಕ್ಕೆ ನಗರದ ರಥ ಮೈದಾನದ ಸಭಾ ಭವನದಲ್ಲಿ ಜರುಗಲಿದೆ. ಹಾರಕೂಡದ ಶ್ರೀ ಡಾ.ಚನ್ನವೀರ ಶಿವಾಚಾರ್ಯರು ನೇತೃತ್ವ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಶಾಸಕ ಶರಣು ಸಲಗರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಪ್ರಾಧ್ಯಾಪಕ ಗುರುಲಿಂಗಪ್ಪ ಧಬಾಲೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net