ಶಿಕ್ಷಕರ ದಿನಾಚರಣೆ: ಸ್ವಚ್ಛತಾ ಅಭಿಯಾನದ ಮೂಲಕ ಗುರುಗಳಿಗೆ ನಮನ

WEB $$$$$$
Published on

ಸಾಗರ: ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ ಜಾಗೃತಗೊಳಿಸುವುದು ಹಾಗೂ ಸೇವಾ ಕಾರ್ಯಗಳಲ್ಲಿ ಅವರನ್ನು ತೊಡಗಿಸಿಕೊಳ್ಳುವಂತೆ ಮಾಡುವುದು ಸೇವಾದಳದ ಪ್ರಮುಖ ಉದ್ದೇಶ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದ್ದೇವೆ ಎಂದು ಸೇವಾದಳ ತಾಲೂಕು ಅಧ್ಯಕ್ಷ ಉಮೇಶ್ ಹಿರೇನೆಲ್ಲೂರು ಹೇಳಿದರು.

ಭಾರತ ಸೇವಾದಳದಿಂದ ಶಿಕ್ಷಕ ದಿನಾಚರಣೆ ಅಂಗವಾಗಿ ಗುರುಭವನ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನ ಉದ್ಘಾಟಿಸಿ ಮಾತನಾಡಿ, ಸೋಮವಾರ ನಾವೆಲ್ಲರೂ ಗೌರವಿಸುವ ಹಾಗೂ ನಮಗೆ ಅಕ್ಷರದಾನ ಮಾಡಿದ ಶಿಕ್ಷಕರ ದಿನಾಚರಣೆ ಇರುವುದರಿಂದ ಗುರುವಿನ ಕೇಂದ್ರಸ್ಥಾನವಾಗಿರುವ ಗುರುಭವನ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸುವ ಮೂಲಕ ನಮ್ಮ ಗೌರವವನ್ನು ತೋರಿಸುವ ಕೆಲಸ ಮಾಡಿದ್ದೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net