

ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಶಿಕ್ಷಕರ ಪರವಾದ ತೀರ್ಮಾನಗಳನ್ನು ತೆಗೆದುಕೊಳ್ಳಲು ಬದ್ಧವಿದೆ ಎಂದು ಜಿಪಂ ಕೆಡಿಪಿ ಸ ದಸ್ಯ ಕೆ.ಸಿ.ನಾಗರಾಜ್ ಹೇಳಿದರು. ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರ ಪರ ಮತಯಾಚಿಸಿ ಮಾತನಾಡಿದರು. ಕಾಂಗ್ರೆಸ್ ಹಿರಿಯ ಉಪಾಧ್ಯಕ್ಷ ಡಿ.ಟಿ.ವೆಂಕಟೇಶ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಂದಿನಿಗೌಡ, ಗ್ಯಾರೆಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶಿವಣ್ಣ, ಮುಖಂಡರಾದ ಮೋಕ್ಷಾ ರುದ್ರಸ್ವಾಮಿ, ಕೆ.ಪಿ.ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ, ಲಕ್ಷ್ಮೀಕಾಂತ್, ಮುದಸಿರ್, ವೆಂಕಟೇಶ್, ಕುಮಾರಗೌಡ ಇದ್ದರು.