ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲಿ

Bylakuppe 01
ಬೈಲಕುಪ್ಪೆಯ ಆವರ್ತಿ ರಾಜೇಶ್ವರಿ ವಿದ್ಯಾಸಂಸ್ಥೆ ಆವರಣದಲ್ಲಿ ಶಿಕ್ಷಕರು ಕಪ್ಪು ಬಟ್ಟೆ ಧರಿಸಿ ಮೃತ ಶಿಕ್ಷಕನಿಗೆ ಮೌನಾನಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
Published on

ಬೈಲಕುಪ್ಪೆ: ಅನುದಾನಿತ ಶಿಕ್ಷಕರ ಬೇಡಿಕೆಗಳನ್ನು ಸರ್ಕಾರ ಶೀಘ್ರವೇ ಈಡೇರಿಸಬೇಕು ಎಂದು ಶಿಕ್ಷಕರು ಕಪ್ಪು ಬಟ್ಟೆ ಕಟ್ಟಿಕೊಂಡು ಗುರುವಾರ ಒತ್ತಾಯಿಸಿದರು.

ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದ ರಾಜೇಶ್ವರಿ ವಿದ್ಯಾಸಂಸ್ಥೆ ಆವರಣದಲ್ಲಿ ಮುಖ್ಯ ಶಿಕ್ಷಕ ಅಪ್ಪಾಜಪ್ಪ ಮಾತನಾಡಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನ ಆವರಣದಲ್ಲಿ ರಾಜ್ಯದ ಎಲ್ಲ ಅನುದಾನಿತ ಶಿಕ್ಷಕರು ಒಗ್ಗಟ್ಟಿನಿಂದ ಪೆನ್ಷನ್ ಮತ್ತು ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ 3 ತಿಂಗಳಿನಿಂದಲೂ ಧರಣಿ ನಡೆಸುತ್ತಿದ್ದಾರೆ. ಇದಕ್ಕೆ ಸ್ಪಂದಿಸದ ಸರ್ಕಾರದ ನಡೆಗೆ ಬೇಸತ್ತು ರಾಯಚೂರು ಜಿಲ್ಲೆಸಯ ಸಿಂಧನೂರು ಗ್ರಾಮದ ಅನುದಾನಿತ ಪ್ರೌಢಶಾಲೆ ಶಿಕ್ಷಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ದೂರಿದರು. ಸರ್ಕಾರ ಈಗಲಾದರೂ ಕೂಡಲೇ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು. ಮೃತ ಶಿಕ್ಷಕರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಮಜಲಿ ಸಲ್ಲಿಸಲಾಯಿತು. ಶಿಕ್ಷಕರಾದ ರುಕ್ಮಾಂಗದ, ಸುಂದರೇಶ್, ಬೈರಯ್ಯ, ಮಹದೇವ್, ಸೌಜನ್ಯರಾಣಿ, ಪುರುಷೋತ್ತಮ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net