ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್

Published on

ಚಾಮರಾಜನಗರ: ಜಿಲ್ಲೆಯ 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹೆಚ್ಚುವರಿ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಕೈಗೊಂಡಿದ್ದು, ಸೆ.11ರಂದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಾಗೂ ಸೆ.12ರಂದು ಪ್ರೌಢಶಾಲಾ ಶಿಕ್ಷಕರಿಗೆ ಬೆಳಗ್ಗೆ 10 ಗಂಟೆಗೆ ನಗರದ ರೈಲ್ವೆ ನಿಲ್ದಾಣದ ಹತ್ತಿರವಿರುವ ಸಂತ ಪೌಲರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಲಿದೆ.

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಸೆ.11ರಂದು ಬೆಳಗ್ಗೆ 10 ಗಂಟೆಗೆ, ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಅಂತಿಮ ಪಟ್ಟಿಯಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರು ಸೆ.12ರಂದು ಬೆಳಗ್ಗೆ 10 ಗಂಟೆಗೆ ಪ್ರೌಢಶಾಲಾ ಶಿಕ್ಷಕರು ನಿಗದಿತ ಸಮಯಕ್ಕೆ ಕಡ್ಡಾಯವಾಗಿ ಹಾಜರಾಗಿ ಆನ್‌ಲೈನ್ ಕೌನ್ಸಲಿಂಗ್‌ನಲ್ಲಿ ಖಾಲಿ ಹುದ್ದೆಗಳ ಶಾಲೆಯನ್ನು ಸ್ವಇಚ್ಛೆಯಿಂದ ಆಯ್ಕೆಮಾಡಿಕೊಂಡು ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net