

ಚಿತ್ರದುರ್ಗ: ಶಿಕ್ಷಕರ ಹಿತ ಕಾಯುವಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಭರವಸೆ ನೀಡಿದರು.
ತಾಲೂಕಿನ ಸೀಬಾರದಲ್ಲಿ ಎಂಎಲ್ಸಿ ಚುನಾವಣೆ ಸಂಬಂಧ ಶನಿವಾರ ಪಕ್ಷದ ಅಭ್ಯರ್ಥಿ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ರಾಜ್ಯ ಸರ್ಕಾರ ವಿಧಾನಸಭಾ ಚುನಾವಣಾ ವೇಳೆ ನೀಡಿದ ಎಲ್ಲ ಭರವಸೆ ಈಡೇರಿಸಿದೆ. ಜೊತೆಗೆ ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿಗೂ ಸಿಎಂ ಸಿದ್ದರಾಮಯ್ಯ ಸಕಲ ಸಿದ್ಧತೆ ಕೈಗೊಂಡಿದ್ದಾರೆ ಎಂದರು.
ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಕೈ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕವಾಗಿ ಶ್ರಮಿಸುವ ವಿಶ್ವಾಸವಿದ್ದು, ಮತದಾರರು ಅವರಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಬಿ.ಪಿ.ತಿಪ್ಪೇಸ್ವಾಮಿ ಇತರರಿದ್ದರು.