ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ

bkt-6-8
ಬಾಗಲಕೋಟೆ ನಗರದ ತೇಜಸ್ ಅಂತಾರಾಷ್ಟ್ರೀಯ ಶಿಕ್ಷಣ ಸಮೂಹ ಸಂಸ್ಥೆಯ ಅಂಗಸಂಸ್ಥೆಯಾದ ಎಂಆರ್ ಎನ್ ಆಯುರ್ವೇದಿಕ ಮೆಡಿಕಲ್ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಡಾ.ನಾಗರಾಜ್ ಎಸ್ ಅವರಿಗೆ ಗುರುಮಾಣಿಕ್ಯ-2022 ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾಲೇಜಿನ ಆಡಳಿತಾಧಿಕಾರಿ ಡಾ.ಶಿವಕುಮಾರ ಗಂಗಲ್, ಕಾಲೇಜಿನ ಪ್ರಾಚಾರ್ಯ ಡಾ.ಮುರಳೀಧರ ಬಡಿಗೇರ ಇದ್ದರು.
Published on

ಬಾಗಲಕೊಟೆ: ನಿಸ್ವಾರ್ಥ ಸೇವೆಯ ಕನಸು ಹೊತ್ತ ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಡುಪಿಯ ಎಸ್ ಡಿ ಎಂ ಕಾಲೇಜಿನ ಉಪನ್ಯಾಸಕ ಡಾ.ನಾಗರಾಜ್ ಎಸ್. ಹೇಳಿದರು.
ನಗರದ ತೇಜಸ್ ಅಂತಾರಾಷ್ಟ್ರೀಯ ಶಿಕ್ಷಣ ಸಮೂಹ ಸಂಸ್ಥೆಯ ಅಂಗಸಂಸ್ಥೆಯಾದ ಎಂಆರ್ ಎನ್ ಆಯುರ್ವೇದಿಕ ಮೆಡಿಕಲ್ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಶಿಕ್ಷಕರ ಜೊತೆ ಇಂದಿನ ವಿದ್ಯಾರ್ಥಿಗಳು ಜೊತೆಗೂಡಿದರೆ ಶಿಕ್ಷಣದ ಪ್ರಕ್ರಿಯೆ ಯಶಸ್ವಿಯಾಗಲು ಸಾಧ್ಯ. ವಿದ್ಯಾರ್ಥಿಗಳು ಸಮಯದ ಸದುಪಯೋಗ ಮತ್ತು ಉತ್ತಮ ಗುಣಗಳ ಅಳವಡಿಕೆ ಮಾಡಿಕೊಳ್ಳಬೇಕು ಎಂದರು.
ಎಂಆರ್ ಎನ್ ಆಯುರ್ವೇದಿಕ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ.ಮುರಳೀಧರ ಬಡಿಗೇರ ಮಾತನಾಡಿ, ಹಲವು ಆಯುರ್ವೇದಿಕ ವೈದ್ಯಕೀಯ ವಿದ್ಯಾರ್ಥಿಗಳು ಬದುಕಿಗೆ ದಾರಿದೀಪವಾಗಿರುವ ಡಾ.ನಾಗರಾಜ್ ಎಸ್ ಅವರು ನಮ್ಮೆಲ್ಲರಿಗೂ ಮಾದರಿ. ಅವರ ಹಾದಿಯಲ್ಲಿಯೇ ನಮ್ಮೆಲ್ಲ ವಿದ್ಯಾರ್ಥಿಗಳು ನಡೆದರೆ ಯಶಸ್ಸು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಡಾ.ನಾಗರಾಜ್ ಎಸ್ ಅವರಿಗೆ ಆಯುರ್ವೇದಿಕ ಕಾಲೇಜಿನಿಂದ ಗುರುಮಾಣಿಕ್ಯ-2022 ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾಲೇಜಿನ ಆಡಳಿತಾಧಿಕಾರಿ ಡಾ.ಶಿವಕುಮಾರ ಗಂಗಲ್, ಎಂ ಆರ್ ಎನ್ ಆಯುರ್ವೇದಿಕ ಕಾಲೇಜಿನ ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು. ಸಮರ್ಥ ಸ್ವಾಮಿ ನಿರೂಪಿಸಿದರು. ಸಮರ್ಥ ಬಡಿಗೇರ ಸ್ವಾಗತಿಸಿದರು. ಸಾಕ್ಷಿ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net