ಶಿಕ್ಷಕರಿಗೆ ಗ್ರಾಮಸ್ಥರಿಂದ ಬೀಳ್ಕೊಡುಗೆ

Sendoff
ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಡಿಗ್ಗೇನಹಳ್ಳಿ ಪ್ರಕಾಶ್ ಅವರನ್ನು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಲೋಕೇಶ್, ರುದ್ರಾರ್ಯ, ರವಿಕುಮಾರ್ ಸೇರಿದಂತೆ ಇತರರಿದ್ದರು.
Published on

ನಂಜನಗೂಡು: ತಾಲೂಕಿನ ಮಡುವಿನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ 20 ವರ್ಷಗಳಿಂದ ಹಿಂದಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಡಿಗ್ಗೇನಹಳ್ಳಿ ಪ್ರಕಾಶ್ ಅವರನ್ನು ಶಾಲಾ ಆಡಳಿತ ಮಂಡಳಿ, ಹಿರಿಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಆತ್ಮೀಯವಾಗಿ ಬೀಳ್ಕೊಟ್ಟರು.

ಶಾಲಾ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರನ್ನು ಒಂದೆಡೆ ಸೇರಿಸಿದ್ದ ಹಿರಿಯ ವಿದ್ಯಾರ್ಥಿಗಳು ಸುಂದರ ಕ್ಷಣಗಳಿಗೆ ಸಾಕ್ಷಿಯಾದರು. ಡಿಗ್ಗೇನಹಳ್ಳಿ ಪ್ರಕಾಶ್ ಮಾತನಾಡಿ, ಶಾಲೆಯ ಸರ್ವಾಂಗೀಣ ಪ್ರಗತಿ ಹಿಂದೆ ಗ್ರಾಮಸ್ಥರ ಸಹಕಾರವನ್ನು ಮರೆಯುವಂತಿಲ್ಲ ಎಂದು ಸ್ಮರಿಸಿದರು.

ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಾದ ಷರೀಫ್, ಜಿ.ಎನ್.ಲೋಕೇಶ್, ಪ್ರಸಾದ್, ಎಂ.ಸಿದ್ದಪ್ಪಾಜಿ, ನಾಗಣ್ಣ ಹಾಗೂ ವಿ.ಪದ್ಮಾವತಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ರವಿಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ಶಶಿಶೇಖರ್, ಮಾಜಿ ಅಧ್ಯಕ್ಷರಾದ ಎಂ.ಡಿ.ಬಸವರಾಜು, ಮಹದೇವಪ್ಪ, ನಿವೃತ್ತ ಮುಖ್ಯ ಶಿಕ್ಷಕ ಎಂ.ಬಸವರಾಜು, ಗ್ರಾಮ ಮುಖಂಡರಾದ ರುದ್ರಾರ್ಯ, ನಾಗೇಶ್, ಗುರುಸ್ವಾಮಿ, ಶಿಕ್ಷಕರಾದ ಮಸಗೆ ಮಹದೇವಸ್ವಾಮಿ, ಬಂಗಾರು, ಶಿಲ್ಪಶ್ರೀ, ಮಹದೇವಸ್ವಾಮಿ, ಡಿ.ಎಸ್.ದೀಪಾ, ರತ್ನಮ್ಮ, ಶಶಿಕಲಾ, ಸುಶೀಲಾ, ಸುನಿಲ್‌ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net