ಶಿಕ್ಷಕರಿಗೆ ಸನ್ಮಾನ

08Kush03
Published on


ಮಡಿಕೇರಿ : ಶಿಕ್ಷಕರ ದಿನಾಚರಣೆ ಅಂಗವಾಗಿ ಯೂನಿಯನ್ ಬ್ಯಾಂಕ್ ಮತ್ತು ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಕೂಡಿಗೆ ವ್ಯಾಪ್ತಿಯ ಶಿಕ್ಷಕರನ್ನು ಇತ್ತೀಚೆಗೆ ಸನ್ಮಾನಿಸಲಾಯಿತು.
ಮೈಸೂರು ವಲಯ ಯೂನಿಯನ್ ಬ್ಯಾಂಕ್‌ನ ಮುಖ್ಯಸ್ಥ ಅನಂತ್‌ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯ, ಸಿದ್ಧಾಂತ, ಆದರ್ಶಗಳನ್ನು ಬೆಳೆಸುವ ಮೂಲಕ ಉತ್ತಮ ಪ್ರಜೆಗಳನ್ನಾಗಿ ರೂಪಿಸುತ್ತಿರುವ ಶಿಕ್ಷಕರ ಪಾತ್ರ ಬಹಳ ದೊಡ್ಡದು ಎಂದರು.
ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕ ಸೆಲ್ವಕುಮಾರ್, ವಿಭಾಗೀಯ ವ್ಯವಸ್ಥಾಪಕ ಸುರೇಶ್, ಪ್ರಕಾಶ್‌ಕುಮಾರ್ ಮಾತನಾಡಿದರು. ಕೂಡಿಗೆ ಯೂನಿಯನ್ ಸ್ವ ಉದ್ಯೋಗ ತರಬೇತಿ ಕೇಂದ್ರದ ನಿರ್ದೇಶಕ ಪ್ರಕಾಶ್‌ಕುಮಾರ್ ಸಹಾಯಕ ಅಧಿಕಾರಿ ಸಲಾವುದೀನ್ ಹರೀಶ್ ಇದ್ದರು.ಕೂಡಿಗೆ ಸೈನಿಕ ಶಾಲೆ, ಕ್ರೀಡಾ ಶಾಲೆ, ಡಯಟ್, ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ತೊರೆನೂರು ಶಿರಂಗಾಲ ಕುಶಾಲನಗರ ವ್ಯಾಪ್ತಿಯ ಆಯ್ದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರುಗಳನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net