

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದ ಚರ್ಚ್ ಆವರಣದಲ್ಲಿ ಭಾನುವಾರ ಶಿಕ್ಷಕರ ದಿನಾಚರಣೆ ಅಂಗವಾಗಿ ಗ್ರಾಮದ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ನಿವೃತ್ತಿ ಹೊಂದಿರುವ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಲೂರ್ದು ಮಾತೆ ಧರ್ಮ ಕೇಂದ್ರದ ಫಾದರ್ ಡಾ. ಎಂ.ವಿನ್ಸೆಂಟ್ ಮಾತನಾಡಿ, ದೇಶ ಹಾಗೂ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರ. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಮಕ್ಕಳಿಗೆ ಶಿಕ್ಷಣ ನೀಡುವುದರ ಮೂಲಕ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಪುಣ್ಯದ ಕಾರ್ಯ. ಹಾಗಾಗಿ ಶಿಕ್ಷಕರನ್ನು ಗೌರವಿಸುವುದು ಎಲ್ಲರ ಆದ್ಯ ಕರ್ತವ್ಯ ಎಂದರು.
ಶಿಕ್ಷಕರಿಗೆ ನೆನಪಿನ ಕಾಣಿಕೆ ವಿತರಿಸಲಾಯಿತು. ಸುಮಾರು 125ಕ್ಕೂ ಹೆಚ್ಚು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗ್ರಾಮದ ಶಾಲೆಗಳಲ್ಲಿ ಸೇವೆ ಸಲ್ಲಿಸಿದ ಎಲ್ಲ ಶಿಕಕ್ಷರು ಒಂದೆಡೆ ಸೇರಿದ್ದು ವಿಶೇಷವಾಗಿತ್ತು.