ಶಿಕ್ಷಕರು ಸೃಜನಾತ್ಮಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಲಿ

ಕೆ.ಆರ್.ಪೇಟೆಯ ಕೆಪಿಎಸ್ ಶಾಲಾ ಆವರಣದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಆಯೋಜಿಸದ್ದ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮು ಮಾತನಾಡಿದರು. ಸಿ.ಕೆ.ಶಿವರಾಮೇಗೌಡ, ಪದ್ಮೇಶ್, ಎಚ್.ಕೆ.ಮಂಜುನಾಥ್, ಎಸ್.ಎಂ.ಬಸವರಾಜ್, ವಿಜಿನಾರಾಯಣ ಇದ್ದರು.
02 krp 02
Published on

ಕೆ.ಆರ್.ಪೇಟೆ: ಕೇವಲ ಪಾಠ ಬೋಧನೆಗೆ ಮಾತ್ರ ಸೀಮಿತವಾಗದೆ ವಿವಿಧ ಸೃಜನಾತ್ಮಕ ಚಟುವಟಿಕೆಯಲ್ಲಿ ಶಿಕ್ಷಕರು ಪಾಲ್ಗೊಳ್ಳುವ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಹೊರತರಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮು ತಿಳಿಸಿದರು.


ಪಟ್ಟಣದ ಕೆಪಿಎಸ್ ಶಾಲೆಯ ಆವರಣದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶನಿವಾರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು.


ಮಕ್ಕಳೊಂದಿಗೆ ಹಾಗೂ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಶಿಕ್ಷಕರು ಕೆಲಸ ಮಾಡುತ್ತಿದ್ದು ಅವರಲ್ಲಿರುವ ಕಲೆ, ಪ್ರತಿಭೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ. ಶಿಕ್ಷಕರು ಸಾಮೂಹಿಕ ಹಾಗೂ ವೈಯಕ್ತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಆಸಕ್ತಿದಾಯಕ ಪ್ರತಿಭೆಗಳನ್ನು ಅನಾವರಣಗೊಳಿಸುವ ಮೂಲಕ ಹೆಚ್ಚು ಕ್ರಿಯಾಶೀಲವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.


ಶಿಕ್ಷಕರಿಗೆ ಸಾಂಸ್ಕೃತಿಕ ಚಟುವಟಿಕೆಗಳು ನೆರವೇರಿದವು. ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮೇಶ್, ಕ್ಷೇತ್ರ ಸಮನ್ವಯಾಧಿಕಾರಿ ಎಚ್.ಕೆ.ಮಂಜುನಾಥ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಂ.ಬಸವರಾಜು, ಕಾರ್ಯದರ್ಶಿ ವಿಜಿನಾರಾಯಣ, ತಾಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಪಿ.ಜೆ.ಕುಮಾರ್, ತಾಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಲಕ್ಷ್ಮಣಗೌಡ, ಸಂಘಟನಾ ಕಾರ್ಯದರ್ಶಿ ಜಿ.ಎಸ್.ಮಂಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net