ಶಿಕ್ಷಕಿ ಬಿ.ಬಿ.ಜಾಜಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ

JAAJI
Published on

ಸಿದ್ದಾಪುರ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚನ್ನಯ್ಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಬಿ.ಬಿ.ಜಾಜಿ ಅವರು ರಾಜ್ಯ ಮಟ್ಟದ ಕಿತ್ತೂರು ರಾಣೆ ಚನ್ನಮ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇತ್ತೀಚೆಗೆ ಜಾಗೃತಿ ಟ್ರಸ್ಟ್ ವತಿಯಿಂದ ಬೆಂಗಳೂರು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಾಧಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಬಿ.ಬಿ. ಜಾಜಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಕಳೆದ 29 ವರ್ಷಗಳ ಸುದೀರ್ಘ ಸೇವೆಯಲ್ಲಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಕ್ರೀಡಾಪಟುವಾಗಿ ಸಾಧನೆ ಮಾಡಿ ಹಲವಾರು ಪ್ರಶಸ್ತಿಯೊಂದಿಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ವಿಜೇತೆಯಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಹಲವಾರು ಪ್ರಶಸ್ತಿಯೊಂದಿಗೆ ಬಹುಮಾನಗಳನ್ನು ಪಡೆದು ಕ್ರೀಡಾ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಸೇವಾದಳದಲ್ಲೂ ಸೇವೆಯನ್ನು ಮಾಡುತ್ತಿದ್ದು, ವಿವಿಧ ಸಂಘ-ಸಂಸ್ಥೆಗಳಿಂದಲೂ ಸನ್ಮಾನ ಗೌರವ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net