

ಶಿಕ್ಷಕಿ ಸುರೇಖಾ ಅವರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ:
ಧಾರವಾಡದಲ್ಲಿ ಈಚೆಗೆ ನಡೆದ ರಾಜ್ಯ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರು ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಸಾವಿತ್ರಿ ಬಾಯಿ ಫುಲೆ ಜಯಂತಿ ಅಂಗವಾಗಿ ಕೊಡಮಾಡಿ ಕೊಡುವ ರಾಷ್ಟ ಮಟ್ಟದ ಪ್ರಶಸ್ತಿಗೆ ಶಿಕ್ಷಕಿ ಸುರೇಖಾ ಬಾಯನ್ನವರ ಭಾಜನರಾಗಿದ್ದಾರೆ.
ಹುಕ್ಕೇರಿ ತಾಲೂಕಿನ ಹರಗಾಪೂರ ಗ್ರಾಮದ ಕನ್ನಡ ಸರ್ಕಾರಿ ಪ್ರೌಡ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸುರೇಖಾ ಬಾಯನ್ನವರ ಅವರ ಶೈಕ್ಷಣಿಕ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.
ಸಮಾರಂಭದಲ್ಲಿ ಶಿವಪಂಚಾಕ್ಷರ ಸ್ವಾಮೀಜಿ, ಬುಡರಕಟ್ಟಿಯ ಗುರು ಮಡಿವಾಳೇಶ್ವರ ಸ್ವಾಮೀಜಿ,
ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಾ.ವಿಶ್ವನಾಥ ಡಿ,ಕಾರ್ಯದರ್ಶಿ ರಾಠೋಡ,ಹುಬ್ಬಳ್ಳಿ ಹಿರಿಯ ಪತ್ರಕರ್ತ ರಾಜು ವಿಜಾಪುರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇದ್ದರು.