ಶಿಕ್ಷಣ, ಉದ್ಯೋಗ ನೀಡುವಲ್ಲಿ ವಿದ್ಯಾವರ್ಧಕ ಸಾಧನೆ

1686390472982
Published on

ಮೈಸೂರು: ಅಂತಾರಾಷ್ಟ್ರೀಯ 250ಕ್ಕೂ ಹೆಚ್ಚು ಕಂಪನಿಗಳು ಪ್ರತಿ ವರ್ಷ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸುತ್ತಿದೆ. ಈ ಮೂಲಕ ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಉದ್ಯೋಗದಲ್ಲಿ ಉತ್ತಮ ಅವಕಾಶವನ್ನು ನೀಡುವಲ್ಲಿ ವಿದ್ಯಾವರ್ಧಕ ಸಂಸ್ಥೆಯು ಸಾಧನೆಯ ಹಾದಿಯಲ್ಲಿದೆ.

1997ರಲ್ಲಿ ಆರಂಭವಾದ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯವು ವರ್ಷದಿಂದ ವರ್ಷಕ್ಕೆ ಎತ್ತರಕ್ಕೆ ಬೆಳೆದಂತೆ ಇಲ್ಲಿನ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣ ಪಡೆದು, ಉನ್ನತ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ. ಮುಖ್ಯವಾಗಿ ಈ ಸಂಸ್ಥೆಯಲ್ಲಿ ಸ್ಟೂಡೆಂಟ್ ಕ್ಲಬ್ಸ್ ಆರಂಭಿಸಿದ್ದು, ಇದರಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮ ಆಸಕ್ತಿಗೆ ಅನುಗುಣವಾಗಿ ತೊಡಗಿಸಿಕೊಳ್ಳಲು ಸಹಕಾರಿಯಾಗಿದೆ.

ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ತಮ್ಮ ಆಸಕ್ತಿದಾಯಕ ಕ್ಷೇತ್ರದಲ್ಲಿ ಭಾಗವಹಿಸಿ, ತಮ್ಮ ಪ್ರತಿಭೆಯನ್ನು ಅನಾವರಣ ಮಾಡಲು ಅವಕಾಶವಿದೆ. 12ಕ್ಕೂ ಹೆಚ್ಚು ಕ್ಲಬ್‌ಗಳಿದ್ದು, ತಮ್ಮ ಹವ್ಯಾಸಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ತೊಡಗಿಕೊಳ್ಳಬಹುದು.

ಬ್ಯಾಚುಲರ್ ಆಫ್ ಎಂಜಿನಿಯರಿಂಗ್, ಮಾಸ್ಟರ್ ಆಫ್ ಎಂಜಿನಿಯರಿಂಗ್, ಮಾಸ್ಟರ್ ಆಫ್ ಬುಸಿನೆಸ್ ಅಡ್ಮಿನಿಸ್ಟೇಷನ್, ಡಾಕ್ಟರ್ ಆಫ್ ಫಿಲಾಸಫಿ ಸೇರಿದಂತೆ ಅನೇಕ ಕೋರ್ಸ್‌ಗಳು ಲಭ್ಯವಿದೆ.

ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ವಿಜಯವಾಣಿ ಹಾಗೂ ದಿಗ್ವಿಜಯ ವಾಹಿನಿಯ ವತಿಯಿಂದ ಶನಿವಾರ ಮತ್ತು ಭಾನುವಾರ ಆಯೋಜಿಸಿರುವ ಎಜುಕೇಷನ್ ಎಕ್ಸ್‌ಪೋದಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಅಕ್ಷಯ್ ಭಟ್ ಹಾಗೂ ತಂಡ ಆಸಕ್ತರಿಗೆ ಮಾಹಿತಿ ನೀಡುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net