

ಹಾಸನ: ಮುಂದಿನ ವರ್ಷ ಜೂನ್‌ನಲ್ಲಿ ದಕ್ಷಿಣ ಶಿಕ್ಷಣ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯಲ್ಲಿ ತಾನು ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿ ಯಾಗಿದ್ದೇನೆ ಎಂದು ಡಾ. ಕೆ.ಟಿ ಚೇತನ್ ಕುಮಾರ್ ಹೇಳಿದರು.
ಹಾಸನ ಜಿಲ್ಲೆಯವನಾದ ತಾನು ಬಿಜೆಪಿ ಪಕ್ಷದಲ್ಲಿ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿಕೊಂಡು ಬಂದಿದ್ದೇನೆ. ಅಲ್ಲದೆ ತನ್ನದೇ ಆದ ಶಿಕ್ಷಣ ಸಂಸ್ಥೆಯನ್ನು ನಡೆಸಿಕೊಂಡು ಬಂದಿರುವ ನಾನು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆಗೆ ಮುಂದಾಗಿದ್ದೇನೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಮ್ಮ ಅಭಿಲಾಷೆ ವ್ಯಕ್ತಪಡಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿರುವ ನಾನು ಈ ಚುನಾವಣೆಯಲ್ಲಿ ಗೆದ್ದು ಆಯ್ಕೆಯಾದರೆ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಹೋರಾಟ ಮಾಡುತ್ತೇನೆ. ಪದವಿ, ಸ್ನಾತಕೋತ್ತರ ಪದವಿ ಪಡೆದಿರುವ ನಾನು ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದೇನೆ. ಮುಂಬರುವ ಚುನಾವಣೆಯಲ್ಲಿ ದಕ್ಷಿಣ ಭಾಗದ ಪ್ರಜ್ಞಾವಂತ ಮತದಾರರು ತನಗೆ ಮತ ನೀಡುವ ಮೂಲಕ ಶಿಕ್ಷಣ ಕ್ಷೇತ್ರದ ಬದಲಾವಣೆ ತರಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಾಧ್ಯಮ ವಕ್ತಾರೆ ಬಿ.ವೇದಾವತಿ, ಬಿಜೆಪಿ ಮುಖಂಡರಾದ ಮೈಲಾರಯ್ಯ, ಬಸವರಾಜ್, ರುದ್ರೇಗೌಡ, ಬಸವರಾಜ್, ವಿನಯ್, ಅನೂಪ್ ರಾಜ್, ಶಂಕರ್ ಶೆಟ್ಟಿ ಇತರರು ಇದ್ದರು.