ಶಿಕ್ಷಣ ಮಕ್ಕಳ ಮೂಲ ಹಕ್ಕು

CTD 27 WORKSHOP--0002
????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಚಿತ್ರದುರ್ಗ: ಶಿಕ್ಷಣ ಮಕ್ಕಳ ಮೂಲ ಹಕ್ಕು. ಆದ್ದರಿಂದ ಯಾವುದೇ ಮಗು ಕಲಿಕೆಯಿಂದ ಹಿಂದುಳಿಯದಂತೆ ಅಧಿಕಾರಿಗಳು, ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಡಿಎಸ್‌ಇಆರ್‌ಟಿ ವತಿಯಿಂದ ನಗರದ ಡಯಟ್‌ನಲ್ಲಿ ಸೋಮವಾರ ಹಾಜರಾತಿ ಪ್ರಾಧಿಕಾರ ಹಾಗೂ ಇಲಾಖಾ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಇಲಾಖೆಯ ತಾಲೂಕು ಹಂತದ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಿದರೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀ ಡಲು ಸಾಧ್ಯವಾಗುತ್ತದೆ ಎಂದರು.
ಶಿಕ್ಷಣ ಸಂಯೋಜಕರು ಮತ್ತು ಸಿಆರ್‌ಪಿಯವರು ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಕಾರ್ಯೋನ್ಮುಖರಾಗಬೇಕು. ಎಲ್ಲ ಮಕ್ಕಳಿಗೆ ಶಿಕ್ಷಣ ಕೊಡುವುದು ಶೈಕ್ಷಣಿಕ ಭಾಗೀದಾರರ ಜವಾಬ್ದಾರಿ. ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಬಾಲ್ಯ ಹಂತವನ್ನು ಉತ್ತಮಗೊಳಿಸಿ ಮ ಕ್ಕಳು ಜವಾಬ್ದಾರಿಯುತ ನಾಗರಿಕರಾಗಲು ಶ್ರಮಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಸಿ.ಎಸ್.ವೆಂಕಟೇಶಪ್ಪ ಮಾತನಾಡಿ, ಶೈಕ್ಷಣಿಕ ವರ್ಷ ಪ್ರಾರಂಭದ ದಿನದಲ್ಲಿ ನಾವು ಶಾಲೆ ಕಡೆ ಮಕ್ಕಳನ್ನು ಕರೆ ತರಲು ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
ದಾಖಲಾತಿ, ಹಾಜರಾತಿ, ಉಳಿಕೆ, ಸಾಧನೆ ಅಂಶಗಳನ್ನು ಆಧಾರವಾಗಿ ಇಟ್ಟುಕೊಂಡು ಶಾಲೆಗೆ ದಾಖಲಾದ ಮಗು ತನ್ನ ಶಿಕ್ಷಣ ಪೂರ್ಣಗೊಳಿಸಲು ಶೈಕ್ಷಣಿಕ ಅನುಪಾಲನಾಧಿಕಾರಿಗಳು ಕಾರ್ಯಪ್ರವೃತ್ತರಾಗ ಬೇಕು. ತಾಲೂಕು ಹಂತದಲ್ಲಿ ಶಿಕ್ಷಣ ಸಂಯೋಜಕರು ಮಕ್ಕಳ ಹಾಜರಾತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವುದರ ಮೂಲಕ ಮಕ್ಕಳು ಗೈರು ಹಾಜರಾಗದಂತೆ ಗಮನ ನೀಡಬೇಕು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಕೆ.ಜಿ.ಪ್ರಶಾಂತ್, ಬಿ.ಎಸ್.ನಿತ್ಯಾನಂದ, ಉಪ ಪ್ರಾಚಾರ್ಯ ಅಶ್ವತ್ಥನಾರಾಯಣ, ಹಿರಿಯ ಉಪನ್ಯಾಸಕರಾದ ತಿಪ್ಪೇಸ್ವಾಮಿ, ಗಿರಿಜಾ, ಸಹಾಯಕ ಯೋಜನಾ ಸಮನ್ವಯಾಧಿಕಾರಿ ಮಂಜುನಾಥ್, ಉಪನ್ಯಾಸಕ ಎಸ್.ಬಸವರಾಜು, ಬಿಆರ್‌ಸಿ ಸುರೇಂದ್ರನಾಥ್, ಶ್ರೀನಿವಾಸ್, ತಿಪ್ಪೇಸ್ವಾಮಿ, ತಿಪ್ಪೇರುದ್ರಪ್ಪ, ಶಿಕ್ಷಕಿ ಗಿರಿಜಮ್ಮ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net