ಶಿಕ್ಷಣ ರಂಗದ ಪ್ರಗತಿಗೆ ಕೆಕೆಆರ್‌ಡಿಬಿ ಬಲ

klb6
ಸೇಡಂನ ಬಸವನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ವಿವಿಧ ಶಾಲಾ ಕೋಣೆ ನಿರ್ಮಾಣ ಕಾಮಗಾರಿಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಚಾಲನೆ ನೀಡಿದರು. ಶ್ರೀಯಾಂಕಾ ಧನಶ್ರೀ, ವಿಶ್ವನಾಥ, ಮಾರುತಿ ಹುಜರತಿ ಇತರರಿದ್ದರು.
Published on

ಸೇಡಂ: ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿAದ ಎಜುಕೇಷನ್ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.

ಬಸವನಗರದಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ 1.24 ಕೋಟಿ ರೂ. ವೆಚ್ಚದಲ್ಲಿ ತಾಲೂಕಿನ ವಿವಿಧೆಡೆ 9 ಶಾಲಾ ಕೋಣೆಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಕೆಕೆಆರ್‌ಡಿಬಿ ಅಕ್ಷರ ಅವಿಷ್ಕಾರ ಯೋಜನೆಯಡಿ ಪಟ್ಟಣದ ಬಸವನಗರದ ಶಾಲೆಯಲ್ಲಿ 6, ಸಮಖೇಡ ತಾಂಡದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2, ಕಿಶನ್ ತಾಂಡಾದಲ್ಲಿರುವ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 1 ಕೋಣೆ ನಿರ್ಮಾಣ ಮಾಡಲಾಗುತ್ತಿದೆ. ಬಸವನಗರದ ಶಾಲೆಯಲ್ಲಿ ಮಳೆ ನೀರು ನಿಂತು ಸಮಸ್ಯೆಯಾಗುತ್ತಿದೆ ಎನ್ನುವ ದೂರಿದ್ದು ಗುತ್ತೀಗೆದಾರರು ಸರಿಪಡಿಸಬೇಕು ಎಂದು ಸೂಚನೆ ನೀಡಿದರು.

ಪುರಸಭೆ ಅಧ್ಯಕ್ಷ ವಿರೇಂದ್ರ ರುದ್ನೂರ, ತಹಸೀಲ್ದಾರ್ ಶ್ರೀಯಾಂಕಾ ಧನಶ್ರೀ, ಪಂಚಾಯತ್‌ರಾಜ್ ಇಲಾಖೆ ಎಇಇ ವಿಶ್ವನಾಥ ಮಾವಿನಗಿಡ, ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಉಮಾಪತಿರಾಜು, ರಾಜ್ಯ ತೋಟಗಾರಿಕೆ ಮಹಾಮಂಡಳಿ ಮಾಜಿ ಅಧ್ಯಕ್ಷ ಬಸವರಾಜ ಪಾಟೀಲ್ ಊಡಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗೇಶ್ವರಾವ ಮಾಲಿಪಾಟೀಲ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್, ಕಾರ್ಮಿಕರ ಸಂಘದ ಅಧ್ಯಕ್ಷ ಸತೀಶರೆಡ್ಡಿ ಪಾಟೀಲ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿವಶಂಕ್ರಯ್ಯಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಸಾಗರ, ಪ್ರಮುಖರಾದ ವಿಶ್ವನಾಥ ಪಾಟೀಲ್, ಅಬ್ದುಲ್ ಗಫೂರ, ಸತೀಶ ಪೂಜಾರಿ, ರಾಜು ಚವ್ಹಾಣ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net