ಶಿಕ್ಷಣ ವ್ಯವಸ್ಥೆ ಬಲಪಡಿಸಲು ಆಗ್ರಹ

Sdpi
Published on

ಚಿತ್ರದುರ್ಗ: ರಾಜ್ಯದ ಶಿಕ್ಷಣ ವ್ಯವಸ್ಥೆ ಬಲಪಡಿಸಲು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವುದರ ಜೊತೆಗೆ ಸಂಖ್ಯೆ ಹೆಚ್ಚಿಸಲು 2025-26ರ ರಾಜ್ಯ ಬಜೆಟ್‌ನಲ್ಲಿ ವಿಶೇಷ ಅನುದಾನ ಮೀಸಲಿಡಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಜಿಲ್ಲಾ ಅಧ್ಯಕ್ಷ ಅಫಾನ್ ಅಲಿ ಒತ್ತಾಯಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಸೇರಿ ಸಮಗ್ರ ಅಭಿವೃದ್ಧಿಗಾಗಿ 10 ಸಾವಿರ ಕೋಟಿ ರೂ. ಮೀಸಲಿಡಬೇಕು. ಹಿಂದುಳಿದ ವರ್ಗಗಳ ಉನ್ನತೀಕರಣಕ್ಕಾಗಿ ಸ್ಟಾರ್ಟಪ್‌ಗಳಿಗೆ ಬೆಂಬಲ ಮತ್ತು ಉದ್ಯೋಗ ಸೃಷ್ಟಿಗೆ ಕ್ರಮವಹಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಪದವಿಪೂರ್ವ, ಪದವಿ, ಉನ್ನತ ಶಿಕ್ಷಣ ಕೈಗೊಳ್ಳುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿಶೇಷ ಅನುದಾನ ನೀಡಬೇಕು. ದಲಿತರು, ರೈತರು, ಮಹಿಳೆಯರು ಸೇರಿ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ವಕ್ಫ್ ಆಸ್ತಿಗಳಿದ್ದು, ಅವುಗಳ ರಕ್ಷಣೆ ಮತ್ತು ಅಭಿವೃದ್ಧಿಗಾಗಿ 1ಸಾವಿರ ಕೋಟಿ ರೂ. ನೀಡಬೇಕು. ದುರುಪಯೋಗ ತಡೆಯಲು ಅಗತ್ಯ ಕ್ರಮವಹಿಸಬೇಕು ಎಂದು ಕೋರಿದರು.

ಪದಾಧಿಕಾರಿಗಳಾದ ಕಮ್ರಾನ್ ಅಲಿ, ಯಾಸೀನ್ ಶರೀಫ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net