ಶಿಕ್ಷಣ ವ್ಯವಸ್ಥೆಗೆ ಅರ್ಥಪೂರ್ಣ ಚೌಕಟ್ಟು ಹಾಕಿದು:ಸರ್ವಪಲ್ಲಿ ರಾಧಾಕೃಷ್ಣನ್

ಶಿಕ್ಷಣ ವ್ಯವಸ್ಥೆಗೆ ಅರ್ಥಪೂರ್ಣ ಚೌಕಟ್ಟು ಹಾಕಿದು:ಸರ್ವಪಲ್ಲಿ ರಾಧಾಕೃಷ್ಣನ್
Published on

ಹಾಸನ: ಭಾರತದ ಶಿಕ್ಷಣ ವ್ಯವಸ್ಥೆಗೆ ಅರ್ಥಪೂರ್ಣ ಚೌಕಟ್ಟು ಹಾಕಿಕೊಟ್ಟ ಶಿಕ್ಷಣ ತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ದೇಶದ ಅಭಿವೃದ್ಧಿಗೆ ತಮ್ಮದೇಯಾದ ಕೊಡುಗೆ ನೀಡಿದ್ದಾರೆಂದು ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎ.ಜೆ.ಕೃಷ್ಣಯ್ಯ ಅವರು ಹೇಳಿದರು.
ಕಾಲೇಜು ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ರಾಧಾಕೃಷ್ಣನ್ ಅವರು ಪ್ರತಿಪಾದಿಸಿದ ಶಿಕ್ಷಣದ ಮೌಲ್ಯವನ್ನುಯುವ ಪೀಳಿಗೆಗೆ ಹೇಳಿಕೊಡಬೇಕಿದೆ. ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು, ಸುಂದರ ನಾಡು ಕಟ್ಟಲು ಅಜ್ಞಾನದಿಂದ ಸುಜ್ಞಾನದ ಹಾದಿಯಲ್ಲಿ ಸಾಗಲು ಶಿಕ್ಷಕರ ಮಾರ್ಗದರ್ಶನ ಅತ್ಯವಶ್ಯಕವಾಗಿದೆಯೆಂದರು.
ಪ್ರಾಧ್ಯಾಪಕ ಬಿ.ನೀಲಕಂಠಪ್ಪ ಅವರು ಮಾತಾನಾಡಿ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಶ್ರೇಷ್ಠ ಕೆಲಸವಾಗಿದೆ. ಗುರುವಿನ ಸ್ಥಾನ ಶ್ರೇಷ್ಠವಾದುದು ಎಂದು ತಿಳಿಸಿದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ಅಧೀಕ್ಷಕ ಶಿವಕುಮಾರ್ ಅವರು ಮಾತನಾಡಿ, ಸರ್ವಪಲ್ಲಿ ರಾಧಾಕೃಷ್ಣನ್ ಅವರು 1888ರ ಸೆ. 5 ರಂದು ತಮಿಳುನಾಡಿನ ತಿರುಟ್ಟಣಿಯಲ್ಲಿ ಜನಿಸಿದರು. ಅವರ ತಂದೆ ಸರ್ವಪಲ್ಲಿ ವೀರ ಸ್ವಾಮಿ ಹಾಗು ತಾಯಿ ಸೀತಮ್ಮ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ತತ್ವ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು, ಮೈಸೂರು ವಿಶ್ವವಿದ್ಯಾಲಯದಲ್ಲಿ ತತ್ವಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆಂದರು.
ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ.ಎಚ್.ಎಸ್.ನರಸಿಂಹನ್ ಹಾಗು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net