ಶಿಕ್ಷಣಕ್ಕೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ಪೂರಕ

24ss1udghatane
Published on

ಶನಿವಾರಸಂತೆ: ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದ ಅವಿಭಾಜ್ಯ ಅಂಗ ಎಂದು ಆಲೂರು ಸಿದ್ದಾಪುರ ಸರ್ಕಾರಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಹೇಳಿದರು. ಆಲೂರು ಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 2024-25ನೇ ಸಾಲಿನ ವಾರ್ಷಿಕೋತ್ಸವ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಕಲೋತ್ಸವ ಮತ್ತು ಕ್ರೀಡಾ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಯೊಂದಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ತಮ್ಮನ್ನು ತಾವು ತೊಡಗಿಸಿ ಕೊಳ್ಳಬೇಕು. ಕ್ರೀಡೆ ಮತ್ತು ಕಲೆಗಳು ಮಗುವಿನ ಸರ್ವತೋಮುಖ ಬೆಳವಣಿಗೆಗೆ ಪೂರಕ. ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯ ದೃಢತೆಯನ್ನು ಹೆಚ್ಚಿಸಿಕೊಳ್ಳಲು ಇವು ಸಹಕರಿಸಲಿವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net