

ಬೀದರ್: ಸಮಾಜ ಕಲ್ಯಾಣ ಇಲಾಖೆ ಹಾಗೂ ಬಸವಣ್ಣ ಶಿಕ್ಷಣ, ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ವತಿಯಿಂದ ತಾಲೂಕಿನ ಬಗದಲ್ ಗ್ರಾಮದಲ್ಲಿ ಶನಿವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು ಬೀದಿ ನಾಟಕ, ವಿಚಾರ ಸಂಕಿರಣ ಮತ್ತು ಕೋಮು ಸೌಹಾರ್ದ ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು.
ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಉದ್ಘಾಟಿಸಿ ಮಾತನಾಡಿ, ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು. ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಸುಭಾಷ ನಾಗೂರೆ ಮಾತನಾಡಿದರು. ನಿವೃತ್ತ ಪ್ರಾಚಾರ್ಯ ವಿಠಲದಾಸ ಪ್ಯಾಗೆ ಉಪನ್ಯಾಸ ನೀಡಿದರು. ಸಂಸ್ಥೆ ಅಧ್ಯಕ್ಷ ಬಸವರಾಜ ಖಂಡ್ರೆ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಕಲಾವಿದ ಶಂಕರ ಚೋಡಿ ಮತ್ತು ತಂಡದವರಿಂದ ಬೀದಿ ನಾಟಕ ಪ್ರದರ್ಶಿಸಿದರು. ಸಂಸ್ಥೆ ಕಾರ್ಯದರ್ಶಿ ಪ್ರದೀಪ ನಾಟೇಕರ್ ನಿರೂಪಣೆ ಮಾಡಿದರು.