ಶಿಕ್ಷಣದಿಂದ ಮಹಿಳೆಯರ ಅಭಿವೃದ್ಧಿ

nss
ಚಿಕ್ಕಮಗಳೂರು ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್ ಮತ್ತಿತರ ಚಟುವಟಿಕೆಗಳ ಸಮಾರೋಪದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಎಚ್.ಡಿ.ತಮ್ಮಯ್ಯ, ಎಸ್.ಎಲ್.ಬೋಜೇಗೌಡ, ಬಿ.ಜಿ.ವಿರೂಪಾಕ್ಷ, ಡಾ. ಲೋಕೇಶ್ ನಾಯಕ್ ಇತರರಿದ್ದರು.
Published on

ಚಿಕ್ಕಮಗಳೂರು: ಉನ್ನತ ಶಿಕ್ಷಣ ಪಡೆದುಕೊಂಡವರು ವಿವಿಧ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿಕ್ಷಣವೇ ಆಸ್ತಿಯಾಗಿದ್ದು, ಯಾರೂ ವಂಚಿತರಾಗಬಾರದು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ನಗರದ ಕುವೆಂಪು ಕಲಾ ಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಹಾಗೂ ರೇಂಜರ್ಸ್ ಚಟುವಟಿಕೆಗಳ ಸಮಾರೋಪದಲ್ಲಿ ಮಾತನಾಡಿದರು.
ಹೆಣ್ಣು ಮಕ್ಕಳು ಸರ್ಕಾರಿ ಸೌಲಭ್ಯ ಪಡೆದುಕೊಂಡು ಶಿಕ್ಷಣ ಪಡೆಯಬೇಕು. ಕಾಲೇಜಿಗೆ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 15 ಕೋಟಿ ರೂ. ವೆಚ್ಚದ ಕಟ್ಟಡವನ್ನು ಡಯಟ್ ಆವರಣದಲ್ಲಿ ನಿರ್ಮಿಸುವ ಯೋಜನೆ ಇದೆ. ಮುಂದಿನ ಬಜೆಟ್‌ನಲ್ಲಿ ಅನುದಾನ ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು. ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮಾತನಾಡಿ, ಹೆಣ್ಣು ಮಕ್ಕಳು ವಿದ್ಯಾವಂತರಾಗಿ ಉನ್ನತ ಸ್ಥಾನಕ್ಕೇರಬೇಕು ಎಂದರು. ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಬಿ.ಜಿ.ವಿರೂಪಾಕ್ಷ , ಪ್ರಾಚಾರ್ಯ ಎಸ್.ಎಂ.ನಟೇಶ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಜಿ.ಮಹೇಶ್ವರಪ್ಪ, ಸಾಂಸ್ಕೃತಿಕ ಸಮಿತಿ ಸಂಚಾಲಕ ದೀಕ್ಷಿತ್‌ಕುಮಾರ್, ಕ್ರೀಡಾ ವಿಭಾಗದ ಸಂಚಾಲಕ ಡಾ. ಲೋಕೇಶ್‌ನಾಯಕ್, ಸಿ.ಎನ್.ಹೇಮಾಮಾಲಿನಿ, ಡಾ. ಕೆ.ಆರ್.ಶ್ರೀನಿವಾಸ್, ಎಂ.ಎನ್.ದೇವರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net