ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ

17 ckm 1
ಚಿಕ್ಕಮಗಳೂರಿನ ಶ್ರೀಗಾಯತ್ರಿ ದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಸಮೃದ್ಧಿ ಕಿಡ್ಸ್ ಕ್ರಿಯೇಟಿವಿಟಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಆಶ್ರಯ ನರ್ಸಿಂಗ್ ಕಾಲೇಜಿನ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಉದ್ಘಾಟಿಸಿದರು. ಶಂಕರನಾರಾಯಣ ಭಟ್, ಆನಂದಕುಮಾರ್ ಶೆಟ್ಟಿ, ಪೂಜಾ, ಉಜ್ವಲ್ ಡಿ.ಪಡುಬಿದ್ರಿ, ಬಾಲಕೃಷ್ಣರಾವ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಶಿಕ್ಷಣದಿಂದ ಮಾತ್ರ ಮನುಷ್ಯನ ಪ್ರಗತಿ ಮತ್ತು ರಾಷ್ಟçದ ಅಭಿವೃದ್ಧಿ ಸಾಧ್ಯ ಎಂದು ಆಶ್ರಯ ನರ್ಸಿಂಗ್ ಕಾಲೇಜಿನ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ತಿಳಿಸಿದರು.

ನಗರದ ಶ್ರೀಗಾಯತ್ರಿ ದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಸಮೃದ್ಧಿ ಕಿಡ್ಸ್ ಕ್ರಿಯೇಟಿವಿಟಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುತ್ತದೆ. ಶಿಕ್ಷಣದಿಂದ ಆತ್ಮವಿಶ್ವಾಸ ಬರುತ್ತದೆ. ಯಶಸ್ಸು ದೊರೆಯುತ್ತದೆ. ವಿದ್ಯಾವಂತರನ್ನು ಮಾತ್ರ ಸಮಾಜ ಗುರುತಿಸಿ, ಗೌರವಿಸಿ, ಸ್ಥಾನಮಾನ ನೀಡುತ್ತದೆ ಎಂದರು.

ವಿದ್ಯೆ ಯಾರೂ ಕದಿಯಲಾಗದ ಅತ್ಯಮೂಲ್ಯವಾದ ಆಸ್ತಿ. ಅದು ನಮ್ಮ ಬಳಿ ಇದ್ದರೆ ಅಧಿಕಾರ, ಅಂತಸ್ತು, ಯಶಸ್ಸು, ಗೌರವ ಸೇರಿದಂತೆ ಎಲ್ಲವೂ ನಮ್ಮನ್ನು ಹುಡುಕಿಕೊಂಡು ಬರುತ್ತವೆ. ನಮ್ಮ ಮಕ್ಕಳು ವಿದ್ಯಾವಂತರಾಗುವುದರಿAದ ಅವರ ಪ್ರಗತಿಯ ಜೊತೆಗೆ ರಾಷ್ಟçದ ಅಭಿವೃದ್ಧಿಯೂ ಆಗುತ್ತದೆ ಎಂದು ತಿಳಿಸಿದರು.

ಪಾಲಕರು ಇದನ್ನು ಅರಿತು ಎಷ್ಟೇ ಕಷ್ಟವಾದರೂ ಬಿಡದೆ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ನಮ್ಮ ಸಂಸ್ಕÈತಿ, ಸಂಸ್ಕಾರವನ್ನೂ ಕಲಿಸಬೇಕು ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಅಧ್ಯಕ್ಷ ಶಂಕರನಾರಾಯಣ ಭಟ್, ಕೇವಲ ೨೩ ವಿದ್ಯಾರ್ಥಿಗಳಿಂದ ಆರಂಭಗೊAಡ ಸಂಸ್ಥೆ ಇಂದು ೧೫೦ಕ್ಕೂ ಹೆಚ್ಚು ಮಕ್ಕಳಿಗೆ ವಿದ್ಯಾದಾನ ಮಾಡುತ್ತಿದೆ. ಗುಣಮಟ್ಟದ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕÈತಿ ಮತ್ತು ಸಂಸ್ಕಾರವನ್ನು ಕಲಿಸುವ ಕೆಲಸವನ್ನೂ ಮಾಡುತ್ತಿದೆ. ಮಕ್ಕಳ ಸರ್ವಾಂಗೀಣ ಬೆಳವಣಿಗೆಗಾಗಿ ಸಂಸ್ಥೆ ದುಡಿಯುತ್ತಿದೆ ಎಂದು ತಿಳಿಸಿದರು.

ಪ್ರಾಚಾರ್ಯೆ ಪೂಜಾ ಶಾಲಾ ವಾರ್ಷಿಕ ವರದಿಯನ್ನು ಮಂಡಿಸಿದರು. ವಾರ್ಷಿಕೋತ್ಸವದ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು. ಬೋಧಕ. ಬೋಧಕೇ ತರ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ಶಾಲೆಯ ಕಾರ್ಯದರ್ಶಿ ಆನಂದ ಕುಮಾರ್ ಶೆಟ್ಟಿ, ಖಜಾಂಚಿ ಉಜ್ವಲ್ ಡಿ.ಪಡುಬಿದ್ರಿ, ಟ್ರಸ್ಟಿಗಳಾದ ಎಚ್.ಬಾಲಕೃಷ್ಣರಾವ್, ರಾಜಾರಾಮ್ ಕೋಟೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net