ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಇರಲಿ ಆದ್ಯತೆ

ctd 3 mahila--05
??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಚಿತ್ರದುರ್ಗ: ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುವಂತೆ ಸರಸ್ವತಿ ಕಾನೂನು ಕಾಲೇಜು ಪ್ರಾಚಾರ‌್ಯೆ ಡಾ.ಎಂ.ಎಸ್.ಸುಧಾ ದೇವಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಹಯೋಗದಲ್ಲಿ ನಗರದ ತರಾಸು ರಂಗಮಂ ದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾಲೇಜಿನ 2023-24ನೇ ಸಾಲಿನ ಪಠ್ಯೇತರ ಕಾರ‌್ಯಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾ ಡಿದರು.
ಶಿಕ್ಷಕರು ಪಠ್ಯದೊಂದಿಗೆ,ಪಠ್ಯೇತರ ಚಟುವಟಿಕೆಗಳಿಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು. ಅವರಿಗೆ ನೀತಿ ಬೋಧನೆ ಮಾಡ ಬೇ ಕು. ಸರ್ಕಾರದ ವಿವಿಧ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು. ಉತ್ತಮ ವಿದ್ಯಾರ್ಥಿಗಳೆಂದು ಗುರುತಿಸಿಕೊಂಡು ಕಾಲೇಜಿಗೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು. ಶಿಕ್ಷಣದಿಂದ ಬದಲಾವಣೆ ಸಾಧ್ಯವೆಂದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಗುಡ್ಡದೇಶ್ವರಪ್ಪ ಮಾತನಾಡಿ, ಶಿಕ್ಷಣ ಹಾಗೂ ಜ್ಞಾನ ಪ್ರಪಂ ಚವನ್ನು ಆಳುತ್ತವೆ. ಬಡತನ,ಮೂಢನಂಬಿಕೆ,ಅಸಮಾನತೆಯಿಂದ ಹೊರಬರಲು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಮೊಬೈಲ್ ಬಳಕೆ ಸ್ವಯಂ ನಿಯಂತ್ರಣದ ಅಗತ್ಯವಿದೆ. ಉತ್ತಮ ಜೀವನ ರೂಪಿಸಿಕೊಳ್ಳುವುದರೊಂದಿಗೆ ಸದೃಢ ರಾಷ್ಟ್ರ ನಿರ್ಮಾಣಕ್ಕೆ ನಾವೆಲ್ಲರೂ ಕೈ ಜೋಡಿ ಸ ಬೇಕಿದೆ ಎಂದರು.
ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ.ಡಿ.ಒ.ಸಿದ್ದಪ್ಪ ಪ್ರಾಸ್ತವಿಕವಾಗಿ ಮಾತನಾಡಿದರು. ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ.ಸಿ.ಚನ್ನಕೇಶವ,ಲೀಲಾವತಿ,ಮಧುಸೂದನ್,ಶಿವಣ್ಣ,ಗಿರೀಶ್, ಶಕುಂ ತಲಾ, ಗ್ರಂಥಪಾಲಕ ಕುಮಾರಸ್ವಾಮಿ, ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕ ಶಿವಪ್ರಸಾದ್ ಮತ್ತಿತರರು ಇದ್ದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ‌್ಯಕ್ರಮಗಳನ್ನು ನಡೆಸಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net